ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ 200 ಮಂದಿಗೆ ಉಚಿತ ಸ್ಟೆಂಟ್ ಅಳವಡಿಸುವ ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಜೂನ್ 12ರಿಂದ 18 ರವರೆಗೆ ಹಮ್ಮಿಕೊಳ್ಳಲಾಗಿದೆ.
ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್ ಹಾಗೂ ಅಮೆರಿಕದ ಮೆಡ್‌ಟ್ರಾನಿಕ್ಸ್, ವಿಸ್ಕಿನ್‌ಸನ್ ಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಜೂನ್ 12 ರಿಂದ 14ರ ವರೆಗೆ ಬೆಂಗಳೂರಿನಲ್ಲಿರುವ ಆಸ್ಪತ್ರೆಯ ಕೇಂದ್ರ ಕಚೇರಿ, 15 ಮತ್ತು 16ಕ್ಕೆ ಆಸ್ಪತ್ರೆಯ ಮೈಸೂರು ಶಾಖೆ, 17 ಮತ್ತು 18ಕ್ಕೆ ಆಸ್ಪತ್ರೆಯ ಕಲಬುರಗಿ ಶಾಖೆಯಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
‘ಬಡ ರೋಗಿಗಳು ಹಾಗೂ ಬಿಪಿಎಲ್ ಕುಟುಂಬದ ಹಿರಿಯ ನಾಗರಿಕರಿಗಾಗಿ ಆಯೋಜಿಸಲಾಗಿದೆ. ಪ್ರತಿ ರೋಗಿಗೂ ಉನ್ನತಮಟ್ಟದ ಸ್ಟೆಂಟ್‌ಗಳನ್ನು ಉಚಿತವಾಗಿ ಅಳವಡಿಸಲಾಗುತ್ತದೆ. ಈಗಾಗಲೇ ಆ್ಯಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟ ರೋಗಿಗಳು ಈ ಸೌಲಭ್ಯ ಪಡೆಯಬಹುದು. ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಆಸಕ್ತರು ಜೂನ್ 8ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕಕ್ಕೆ: ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್, ಮೊ. 9480827888 ಅಥವಾ 080-26944874
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.