ಬೆಂಗಳೂರು: ಜಯನಗರದ ಪ್ರಧಾನ ಅಂಚೆ ಕಚೇರಿಯ 35 ವರ್ಷದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ಈ ಅಂಚೆಕಚೇರಿಯ ವಹಿವಾಟುಗಳನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.
‘ನಮ್ಮ ಸಿಬ್ಬಂದಿಯೊಬ್ಬರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಗುರುವಾರ ಅವರ ಗಂಟಲ ದ್ರವ ಪಡೆದು ಪರೀಕ್ಷೆಗೆ ಕಳುಹಿಸಲಾಗಿದ್ದು, ಸೋಂಕು ಇರುವುದು ಭಾನುವಾರ ದೃಢಪಟ್ಟಿದೆ. ಅವರನ್ನು ಶ್ರೀ ಶ್ರೀ ರವಿಶಂಕರ್ ಗುರೂಜಿ ಆಯುರ್ವೇದ ಆಸ್ಪತ್ರೆಯ ಕೋವಿಡ್ ಆರೈಕೆ ಕೇಂದ್ರಕ್ಕೆ ಕರೆದೊಯ್ಯಲಾಗಿದೆ’ ಎಂದು ಅಂಚೆಕಚೇರಿಯ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.
‘ಬಿಬಿಎಂಪಿ ಸಿಬ್ಬಂದಿ ಅಂಚೆಕಚೇರಿಗೆ ಸೋಂಕು ನಿವಾರಕ ದ್ರಾವಣವನ್ನು ಸೋಮವಾರ ಸಿಂಪಡಿಸಿದ್ದಾರೆ. ಇಲ್ಲಿನ ಎಲ್ಲ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.