ADVERTISEMENT

ಜೆಇಇ: ನಾರಾಯಣ ಸಂಸ್ಥೆ ವಿದ್ಯಾರ್ಥಿಗಳ ಸಾಧನೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2024, 20:55 IST
Last Updated 26 ಏಪ್ರಿಲ್ 2024, 20:55 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ಜಂಟಿ ಪ್ರವೇಶ ಪರೀಕ್ಷೆಯಲ್ಲಿ (ಜೆಇಇ-ಮೇನ್ಸ್‌) ನಾರಾಯಣ ಎಜುಕೇಷನಲ್ ಇನ್‌ಸ್ಟಿಟ್ಯೂಷನ್ಸ್‌ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಅಗ್ರ ಹತ್ತು ರ್‍ಯಾಂಕ್‌ಗಳಲ್ಲಿ ಸಂಸ್ಥೆಯ ಆರು ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. ಅಗ್ರ ನೂರು ರ್‍ಯಾಂಕ್‌ಗಳಲ್ಲಿ 28 ಹಾಗೂ ಸಾವಿರ ರ್‍ಯಾಂಕ್‌ಗಳಲ್ಲಿ 171 ವಿದ್ಯಾರ್ಥಿಗಳು ರ್‍ಯಾಂಕ್ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ.

ADVERTISEMENT

ಜಿ.ನೀಲಕೃಷ್ಣ  ಅಖಿಲ ಭಾರತ ಮಟ್ಟದಲ್ಲಿ (ಎಐಆರ್‌) ಮೊದಲ ರ್‍ಯಾಂಕ್ ಪಡೆದಿದ್ದಾರೆ. ಎಚ್. ವಿದಿತ್ (5), ಎಂ.ಅನೂಪ್ (6), ಎಂ. ಸಾಯಿತೇಜ (7), ಚಿಂಟು ಸತೀಶ್ ಕುಮಾರ್ (8) ಹಾಗೂ ಆರ್ಯನ್ ಪ್ರಕಾಶ್ (10) ಅಗ್ರ ಹತ್ತು ರ್‍ಯಾಂಕ್‌ನಲ್ಲಿ ಸ್ಥಾನ ಪಡೆದ ವಿದ್ಯಾರ್ಥಿಗಳಾಗಿದ್ದಾರೆ. 

ನಾರಾಯಣ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಪಿ. ಸಿಂಧೂರ ಹಾಗೂ ಪಿ. ಶರಣಿ ಅವರು ವಿದ್ಯಾರ್ಥಿ ಗಳನ್ನು ಅಭಿನಂದಿಸಿದ್ದಾರೆ.

‘ಸಂಸ್ಥೆಯಲ್ಲಿನ ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳನ್ನು ಅರ್ಥ ಮಾಡಿಕೊಂಡು ನಮ್ಮಲ್ಲಿ ಬೋಧಿಸಲಾಗುತ್ತದೆ. ಕಲಿಕೆಯಲ್ಲಿ ಎದುರಾಗುವ ಸವಾಲುಗಳನ್ನು ಪರಿಹರಿಸಿ, ನಿರಂತರ ಮೌಲ್ಯಮಾಪನ ಮಾಡಲಾಗುತ್ತದೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಸಾಧಾರಣ ಫಲಿತಾಂಶ ಪಡೆಯಲು ಸಾಧ್ಯವಾಗಿದೆ’ ಎಂದು ಪಿ. ಸಿಂಧೂರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.