ADVERTISEMENT

ಪೀಣ್ಯ ಕೈಗಾರಿಕಾ ಸಂಘದಿಂದ ಉದ್ಯೋಗ ಮೇಳ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2022, 19:32 IST
Last Updated 12 ನವೆಂಬರ್ 2022, 19:32 IST
ಉದ್ಯೋಗ ಮೇಳವನ್ನು ಶಾಸಕ ಆರ್.ಮಂಜುನಾಥ್ ಉದ್ಘಾಟಿಸಿದರು. ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಎಚ್.ಮಂಜುನಾಥ್, ಹಿರಿಯ ಉಪಾಧ್ಯಕ್ಷ ಆರೀಫ್, ಉಪಾಧ್ಯಕ್ಷ ಆರ್.ಶಿವಕುಮಾರ್, ಕಾರ್ಯದರ್ಶಿ ಎಂ. ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಎಚ್.ಕೆ. ಮಲ್ಲೇಶ್‍ಗೌಡ, ಖಜಾಂಚಿ ಬಿ.ಸಿ. ತಿಪ್ಪೇಸ್ವಾಮಿ, ಜಂಟಿ ಖಜಾಂಚಿ ರಮೇಶ್ ಇದ್ದರು

ಪೀಣ್ಯದಾಸರಹಳ್ಳಿ: ‘ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚುತ್ತಿದ್ದು, ಅದಕ್ಕೆ ತಕ್ಕಂತೆ ಯುವ ಸಮೂಹಕ್ಕೆ ತರಬೇತಿ ನೀಡಿ ತಯಾರು ಮಾಡಬೇಕಾಗಿದೆ’ ಎಂದು ಶಾಸಕ ಆರ್.ಮಂಜುನಾಥ್ ಅಭಿಪ್ರಾಯಪಟ್ಟರು.

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಯೋಗದಲ್ಲಿ ಪೀಣ್ಯ ಕೈಗಾರಿಕಾ ಸಂಘ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯಾವ ರೀತಿಯ ಉದ್ಯೋಗಗಳು ಸೃಷ್ಟಿಯಾಗುತ್ತಿವೆ ಎಂಬುದನ್ನು ತಿಳಿದುಕೊಂಡು ತರಬೇತಿ ನೀಡಬೇಕು. ತರಬೇತಿ ಪಡೆದವರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸಿಗುವಂತಾಗಬೇಕು ಎಂದರು.

ADVERTISEMENT

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ) ಅಧ್ಯ‌ಕ್ಷ ನರಸಿಂಹಮೂರ್ತಿ ಮಾತನಾಡಿ, ‘ಭಾರತದಲ್ಲಿ ಕೇವಲ 6 ಕೋಟಿ ಕೈಗಾರಿಕೆಗಳು ನೋಂದಣಿಯಾಗಿವೆ. 70 ಕೋಟಿಯಷ್ಟು ಕಾರ್ಮಿಕರಿದ್ದು, ಇನ್ನೂ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾದರೆ ಎಲ್ಲರಿಗೂ ಉದ್ಯೋಗ ನೀಡಬಹುದು’ ಎಂದರು. ಕೌಶಲಾಭಿವೃದ್ಧಿ ಇಲಾಖೆ ಆಯುಕ್ತ ಅಶ್ವಿನ್‍ಗೌಡ ಮಾತನಾಡಿದರು. ಉದ್ಯೋಗಮೆಳದಲ್ಲಿ ನೂರಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.