ADVERTISEMENT

ಪಂಡಿತಾರಾಧ್ಯಶ್ರೀಗೆ ‘ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 29 ಜನವರಿ 2024, 15:20 IST
Last Updated 29 ಜನವರಿ 2024, 15:20 IST
ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ   

ಬೆಂಗಳೂರು: ಲಂಡನ್‌ನ ಬಸವ ಅಂತರಾಷ್ಟ್ರೀಯ ಪ್ರತಿಷ್ಠಾನ ನೀಡುವ ‘ಡಾ.ಎಂ.ಎಂ. ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ’ಗೆ ಚಿತ್ರದುರ್ಗ ಜಿಲ್ಲೆಯ ಸಾಣೇಹಳ್ಳಿ ತರಳುಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಯ್ಕೆಯಾಗಿದ್ದಾರೆ. 

ಈ ಪ್ರಶಸ್ತಿಯು ₹25 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಫೆ. 6ರಂದು ಧಾರವಾಡದ ಕಲ್ಯಾಣನಗರದಲ್ಲಿರುವ ಮಜ್ಜಿಗೆ ಪಂಚಪ್ಪ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಗದಗದ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ ಎಸ್. ಮಹಾದೇವಯ್ಯ ವಹಿಸಲಿದ್ದು, ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಶಶಿಧರ್ ಲೋಡಕರ್, ಬಿ.ಎಲ್. ಪಾಟೀಲ ಉಪಸ್ಥಿತರಿರಲಿದ್ದಾರೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕೆ.ವಿ. ನಾಗರಾಜಮೂರ್ತಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.