ADVERTISEMENT

ಬಾಳಾಸಾಹೇಬ, ಚಾಂದನಿಗೆ ‘ಕಮಲಾ ಹಂಪನಾ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 23:24 IST
Last Updated 23 ಅಕ್ಟೋಬರ್ 2024, 23:24 IST
ಚಾಂದಿನಿ
ಚಾಂದಿನಿ   

ಬೆಂಗಳೂರು: ನಾಡೋಜ ಕಮಲಾ ಹಂಪನಾ ಸಾಹಿತ್ಯ ವೇದಿಕೆ ನೀಡುವ ‘ಕಮಲಾ ಹಂಪನಾ ಪ್ರಶಸ್ತಿ’ಗೆ ಸಂಶೋಧಕ ಬಾಳಾಸಾಹೇಬ ಲೋಕಾಪುರ ಹಾಗೂ ಕವಯಿತ್ರಿ ಚಾಂದಿನಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ವೇದಿಕೆಯ ಸಹಯೋಗದಲ್ಲಿ ಕರ್ನಾಟಕ ಲೇಖಕಿಯರ ಸಂಘವು ಇದೇ 28ರಂದು ಜೆ.ಸಿ. ರಸ್ತೆಯ ನಯನ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಕವಿಗೋಷ್ಠಿ, ಉಪನ್ಯಾಸ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿದೆ.  

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್‌.ಎನ್. ಮುಕುಂದರಾಜ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಾಹಿತಿ ಹಂ.ಪ. ನಾಗರಾಜಯ್ಯ ಅಧ್ಯಕ್ಷತೆ ವಹಿಸುತ್ತಾರೆ. ಲೇಖಕಿ ವಿನಯಾ ಒಕ್ಕುಂದ ದತ್ತಿ ಉಪನ್ಯಾಸ ನೀಡುತ್ತಾರೆ ಎಂದು ಪ್ರಕಟಣೆ ತಿಳಿಸಿದೆ. ‌

ADVERTISEMENT
ಬಾಳಾಸಾಹೇಬ ಲೋಕಾಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.