ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಜಾಲಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಚಿಕ್ಕಜಾಲದಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕರ್ತರು ಕನಕದಾಸರ ಭಾವಚಿತ್ರಕ್ಕೆ ಹೂಮಾಲೆ ಹಾಕಿ, ಪೂಜೆ ಸಲ್ಲಿಸಿದ ಬಳಿಕ ಸಿಹಿಹಂಚಿ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಜಾಲಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎನ್.ಕೆ.ಮಹೇಶ್‌ಕುಮಾರ್, ‘16ನೇ ಶತಮಾನದಲ್ಲಿಯೇ ಜಾತಿಪದ್ಧತಿಯ ವಿರುದ್ಧ ಹೋರಾಟ ನಡೆಸಿದವರು ಕನಕದಾಸರು. ಕೀರ್ತನೆಗಳ ಮೂಲಕ ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ ಮಹಾನ್ ದಾರ್ಶನಿಕ ಅವರು. ಕನಕರ ಕೀರ್ತನೆಗಳು ಹಾಗೂ ಸಂದೇಶಗಳು ಸಮಾಜಕ್ಕೆ ಇಂದಿಗೂ ಪ್ರಸ್ತುತʼ ಎಂದು ಬಣ್ಣಿಸಿದರು.
ಯಲಹಂಕ ತಾಲ್ಲೂಕು ಭೂನ್ಯಾಯಮಂಡಳಿ ಸದಸ್ಯ ಶೆಟ್ಟಿಗೆರೆ ಅಪ್ಪಾಜಿ, ತಿರುಮಳಪ್ಪ, ಹರೀಶ್‌ಕುಮಾರ್, ಸುಬ್ರಮಣಿ, ಶಿವು, ಅಮೀರ್‌ಜಾನ್, ಬಾಬಾಜಾನ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.