ADVERTISEMENT

ಬೆಂಗಳೂರು: ಕನ್ನಡ ಪುಸ್ತಕ ಹಬ್ಬ ಅ. 26ರಿಂದ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 19:37 IST
Last Updated 16 ಅಕ್ಟೋಬರ್ 2024, 19:37 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಅಕ್ಟೋಬರ್‌ 26ರಿಂದ ಡಿಸೆಂಬರ್‌ 1ರವರೆಗೆ ಕೆಂಪೇಗೌಡ ನಗರದಲ್ಲಿರುವ ರಾಷ್ಟ್ರೋತ್ಥಾನ ಪರಿಷತ್‌ನ ಕೇಶವಶಿಲ್ಪ ಸಭಾಂಗಣದಲ್ಲಿ ‘ಕನ್ನಡ ಪುಸ್ತಕ ಹಬ್ಬ’ ಆಯೋಜಿಸಿಲಾಗಿದೆ.

ಅ.26ರ ಬೆಳಿಗ್ಗೆ 10ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ರಾಷ್ಟ್ರೋತ್ಥಾನ ಪರಿಷತ್‌ನವರೆಗೆ ಭುವನೇಶ್ವರಿ ದೇವಿಯ ಶೋಭಾಯಾತ್ರೆ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ‘ಕನ್ನಡ ಪುಸ್ತಕ ಹಬ್ಬ’ವನ್ನು ಉದ್ಘಾಟಿಸಲಿದ್ದಾರೆ.

ADVERTISEMENT

‘ಪುಸ್ತಕ ಹಬ್ಬದಲ್ಲಿ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟವಿರುತ್ತದೆ. ವಿವಿಧ ಸಾಂಸ್ಕೃತಿಕ, ಸಾಹಿತ್ಯಕ ಚಟುವಟಿಕೆಗಳು ನಡೆಯಲಿವೆ. ರಾಷ್ಟ್ರೋತ್ಥಾನ ಸಾಹಿತ್ಯದ ಪ್ರಕಟಣೆಗಳ ಜೊತೆಗೆ, ಕನ್ನಡದ ಪ್ರಮುಖ ಲೇಖಕರ ಕೃತಿಗಳೂ ರಿಯಾಯಿತಿ ದರದಲ್ಲಿ ಸಿಗಲಿವೆ. ವಿದ್ಯಾರ್ಥಿಗಳಿಗಾಗಿ ಕೆಲವು ಸ್ಪರ್ಧೆಗಳನ್ನು ಆಯೋಜಿಸಲಾಗುವುದು’ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.