ADVERTISEMENT

ವಿಧಾನಸೌಧ, ವಿಕಾಸಸೌಧ ಕನ್ನಡಮಯವಾಗಲಿ: ಬಿಳಿಮಲೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 16:17 IST
Last Updated 16 ಅಕ್ಟೋಬರ್ 2024, 16:17 IST
<div class="paragraphs"><p>ಕನ್ನಡ ಭಾಷೆ ಮತ್ತು ಸಂಸ್ಕೃತಿಗಳ ಪರವಾದ ಘೋಷಣೆಯ ಫಲಕಗಳನ್ನು ಅಳವಡಿಸುವಂತೆ ಪುರುಷೋತ್ತಮ ಬಿಳಿಮಲೆ ಅವರು ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದರು.&nbsp;ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು</p></div>

ಕನ್ನಡ ಭಾಷೆ ಮತ್ತು ಸಂಸ್ಕೃತಿಗಳ ಪರವಾದ ಘೋಷಣೆಯ ಫಲಕಗಳನ್ನು ಅಳವಡಿಸುವಂತೆ ಪುರುಷೋತ್ತಮ ಬಿಳಿಮಲೆ ಅವರು ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದರು. ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು

   

ಬೆಂಗಳೂರು: ‌‘ವಿಧಾನಸೌಧ, ವಿಕಾಸಸೌಧವನ್ನು ಕನ್ನಡದ ಅಸ್ಮಿತೆಯ ಕೇಂದ್ರಗಳಾಗಿಸಿ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಬುಧವಾರ ಭೇಟಿ ಮಾಡಿ, ಅವರು ಚರ್ಚಿಸಿದರು.

ADVERTISEMENT

‘ವಿಧಾನಸೌಧ, ವಿಕಾಸಸೌಧದ ಪಡಸಾಲೆಗಳು, ವಿಧಾನಮಂಡಲದ ಸಭಾಂಗಣಗಳು, ಸಚಿವರು ಮತ್ತು ಅಧಿಕಾರಿಗಳ ಕಚೇರಿಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಗಳ ಪರವಾದ ಘೋಷಣೆಯ ಫಲಕಗಳನ್ನು ಅಳವಡಿಸಬೇಕು’ ಎಂದು ಒತ್ತಾಯಿಸಿದರು.

‘ವಿಧಾನಸೌಧ ಹಾಗೂ ವಿಕಾಸಸೌಧ ಆಡಳಿತದ ಶಕ್ತಿ ಕೇಂದ್ರಗಳಾಗಿದ್ದು, ಕರ್ನಾಟಕದ ಹೆಮ್ಮೆಯ ಪ್ರತೀಕಗಳಾಗಿವೆ. ಸಾರ್ವಜನಿಕರು, ಗಣ್ಯರು, ದೇಶ–ವಿದೇಶಗಳ ಪ್ರತಿನಿಧಿಗಳು ವಿವಿಧ ಕೆಲಸಗಳಿಗಾಗಿ ಇಲ್ಲಿಗೆ ನಿರಂತರ ಭೇಟಿ ನೀಡುವರು. ಇಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಪರ ಘೋಷಣೆಗಳ ಫಲಕ ಅಳವಡಿಸಿದರೆ ಕನ್ನಡದ ಅಸ್ಮಿತೆ ವಿಶ್ವಾತ್ಮಕವಾಗಲಿದೆ’ ಎಂದರು.

‘ಸುವರ್ಣ ಕರ್ನಾಟಕ ಸಂಭ್ರಮದ ಕಾರಣ ಸರ್ಕಾರದ ನಿರ್ಧಾರ ಅರ್ಥಪೂರ್ಣ ಆಚರಣೆಗೆ ಪೂರಕವಾಗಲಿದೆ. ಪ್ರಾಧಿಕಾರವು ಅವಶ್ಯಕತೆಗೆ ಅನುಗುಣವಾಗಿ ನಿರ್ದಿಷ್ಟ ರೂಪುರೇಷೆ ಒದಗಿಸಲಿದೆ’ ಎಂದರು. ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.