ಬೆಂಗಳೂರು: ಮೈಕೊ ಕನ್ನಡ ಬಳಗದ ವತಿಯಿಂದ ನೀಡಲಾಗುವ ‘ರಾಬರ್ಟ್ ಬಾಷ್ ಕನ್ನಡ ಸಾಹಿತ್ಯ ಸೇವಾ ಪ್ರಶಸ್ತಿ’ಗೆ ಸಾಹಿತಿ ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ಆ. 27ರಂದು ಆನಂದ ರಾವ್ ವೃತ್ತದಲ್ಲಿರುವ ಜಗದ್ಗುರು ರೇಣುಕಾಚಾರ್ಯ ಕಾಲೇಜಿನ ಎಸ್.ಜೆ.ಆರ್.ಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಾಷ್ ವಾಣಿಜ್ಯ ಅಧಿಕಾರಿಗಳಾದ ಎಚ್.ಬಿ. ತೋಂಟೇಶ್, ಕಾರ್ಮಿಕ ಸಂಘದ ಅಧ್ಯಕ್ಷ ವಿ.ಜೆ.ಕೆ. ನಾಯರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.