ಬೆಂಗಳೂರು: ಕೋರಮಂಗಲದ ಸಂತ ಫ್ರಾನ್ಸಿಸ್ ಕಾಲೇಜಿನಲ್ಲಿ ಕನ್ನಡ ವಿಭಾಗ ಮತ್ತು ಸಾಂಸ್ಕೃತಿಕ ಸಮಿತಿಯು 69 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿತು.
ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ತಮಟೆ ವಾದಕ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪನವರು ಮಾತನಾಡಿ ತಮಟೆ ವಾದ್ಯ ಕಲೆಯನ್ನು ಯುವಕರು ಉಳಿಸಿ ಬೆಳೆಸಿ ಎಂದರು. ಸಂಗಮೇಶ್ ಉಪಾಸೆ, ಆರತಿ ಸುರೇಶ್, ಜೆ.ಸಿ. ರಾಜು ಅವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕರಾದ ರೆವರೆಂಡ್ ಬ್ರದರ್ ಪೀಟರ್ ಜೋಸೆಫ್, ಪ್ರಾಂಶುಪಾಲರಾದ ಡಾ. ಆರ್ ಎನ್ ಸುಬ್ಬರಾವ್, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ: ಸಂತೋಷ್ ಕುಮಾರ್, ಉಪ ಪ್ರಾಂಶುಪಾಲರಾದ ಕಾರ್ತಿಕ್ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.