ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದಲ್ಲಿ ಎಸ್.ವಿ. ಶ್ರೀನಿವಾಸರಾವ್ ಅವರು ಸ್ಥಾಪಿಸಿರುವ ಸಾರಂಗಿ ವೆಂಕಟರಾಮಯ್ಯ–ಪುಟ್ಟಚ್ಚಮ್ಮ ದತ್ತಿನಿಧಿ 2022ನೇ ಸಾಲಿನ ಪ್ರಶಸ್ತಿಗೆ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ.
2022ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಕಾದಂಬರಿ ಸಲ್ಲಿಸಬಹುದಾಗಿದೆ. ಕಾದಂಬರಿಯ 3 ಪ್ರತಿಗಳನ್ನು ಪ್ರತಿಷ್ಠಾನದ ಕಚೇರಿಗೆ ಡಿ.11ರ ಸಂಜೆ 5ರ ಒಳಗೆ ತಲುಪಿಸಬಹುದು ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಶಾಂತರಾಜು ತಿಳಿಸಿದ್ದಾರೆ.
ಪ್ರಶಸ್ತಿಯು ₹3 ಸಾವಿರ ನಗದು, ಅಭಿನಂದನಾ ಪತ್ರ ಒಳಗೊಂಡಿರುತ್ತದೆ. ಈ ಸ್ಪರ್ಧೆಯು ಉದಯೋನ್ಮುಖ ಸಾಹಿತಿಗಳಿಗೆ ಮಾತ್ರ ಸೀಮಿತವಾಗಿದ್ದು, ಗರಿಷ್ಠ 2 ಕೃತಿಗಳನ್ನು ಮಾತ್ರ ಪ್ರಕಟಿಸಿರಬೇಕು. ಪ್ರಥಮ ಕೃತಿಗೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.