ADVERTISEMENT

ಎಲೆಕ್ಟ್ರಿಕ್‌ ಬಸ್‌ಗಳಲ್ಲಿ ಕನ್ನಡಿಗರೇ ಚಾಲಕರಾಗಿರಲಿ: ಸಾರಿಗೆ ಸಚಿವರಿಗೆ ಪತ್ರ

​ಪ್ರಜಾವಾಣಿ ವಾರ್ತೆ
Published 31 ಮೇ 2024, 15:24 IST
Last Updated 31 ಮೇ 2024, 15:24 IST
ಮನು ಬಳಿಗಾರ್‌
ಮನು ಬಳಿಗಾರ್‌   

ಬೆಂಗಳೂರು: ಬಿಎಂಟಿಸಿಯ ಎಲೆಕ್ಟ್ರಿಕ್‌ ಬಸ್‌ಗಳಲ್ಲಿ ಕನ್ನಡ ಬಾರದ ಚಾಲಕರ ಬದಲು ಕನ್ನಡಿಗರನ್ನೇ ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಮನು ಬಳಿಗಾರ್‌ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ಗೆ ಪತ್ರ ಬರೆದಿದ್ದಾರೆ.

ಬಿಎಂಟಿಸಿಯಲ್ಲಿ ಖಾಸಗಿ ಎಲೆಕ್ಟ್ರಿಕ್‌ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಅದರ ಚಾಲಕರು ಕೂಡ ಖಾಸಗಿಯವರಾಗಿದ್ದಾರೆ. ಅವರಿಗೆ ಕನ್ನಡ ಬರುವುದಿಲ್ಲ. ಕನ್ನಡ ನಾಡಿನ ಜನರು ಉದ್ಯೋಗ ವಂಚಿತರಾಗಿದ್ದಾರೆ. ಎಲ್ಲ ಖಾಸಗಿ ಎಲೆಕ್ಟ್ರಿಕ್‌ ಬಸ್‌ಗಳಿಗೆ ಬಿಎಂಟಿಸಿಯಿಂದಲೇ ಚಾಲಕರನ್ನು ನೇಮಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT