ADVERTISEMENT

ಕಣ್ವ ಸೊಸೈಟಿ ಆಸ್ತಿ ಮುಟ್ಟುಗೋಲಿಗೆ ವಿಳಂಬ: ಹೈಕೋರ್ಟ್ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 18:22 IST
Last Updated 6 ಆಗಸ್ಟ್ 2020, 18:22 IST

ಬೆಂಗಳೂರು: ‘ಕಣ್ವ ಸೌಹಾರ್ದ ಕೋ–ಆಪರೇಟಿವ್ ಸೊಸೈಟಿಆಸ್ತಿಗಳ ಪರಿಶೀಲನೆ ಮತ್ತು ಮುಟ್ಟುಗೋಲು ಪ್ರಕ್ರಿಯೆಗಳನ್ನು ಕೂಡಲೇ ಪೂರ್ಣಗೊಳಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ಸಂಬಂಧ ಕೆ.ಎಸ್.ರಮೇಶ್ ಮತ್ತು ಇತರ ಮೂವರು ಸಲ್ಲಿಸಿದ್ದ ಸಾರ್ಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ವಿಷಯದಲ್ಲಿ ಸರ್ಕಾರ ಅನುಸರಿಸುತ್ತಿರುವ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT