ADVERTISEMENT

ಕಣ್ವ ಸೊಸೈಟಿ: ವರದಿ ನೀಡದಿದ್ದರೆ ಕ್ರಮ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 19:02 IST
Last Updated 9 ಜೂನ್ 2021, 19:02 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕಣ್ವ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಗರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರ ಎರಡು ವಾರಗಳಲ್ಲಿ ವರದಿ ಸಲ್ಲಿಸಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಸಿದೆ.

ಈ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಜೂ.25ಕ್ಕೆ ಮುಂದೂಡಿತು.

ವರದಿ ಸಲ್ಲಿಸಲು 2021ರ ಏ.12ರಂದು ಪೀಠ ಸೂಚಿಸಿದ್ದರೂ, ಸಕ್ರಮ ಪ್ರಾಧಿಕಾರ ಸಲ್ಲಿಸಿಲ್ಲ. ಹೂಡಿಕೆದಾರರ ಹಿತರಕ್ಷಣೆಗೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.