ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರರಾಜ್ಯ ಬಜೆಟ್ ಅನ್ನು ಮಂಡಿಸಿದ್ದು, ರಾಜ್ಯಧಾನಿ ಬೆಂಗಳೂರಿಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
* ಬೆಂಗಳೂರಿನ ಚಲನಶೀಲತೆ ಯೋಜನೆಗೆ (ಮೊಬಿಲಿಟಿ) ₹ 50 ಕೋಟಿ
* ₹ 8015 ಕೊಟಿ ಅಂದಾಜು ವೆಚ್ಚದ ನವ ಬೆಂಗಳೂರು ಕ್ರಿಯಾ ಯೋಜನೆ ಅನುಷ್ಠಾನಕ್ಕೆ 2019–20ರಲ್ಲಿ ₹ 2,300 ಕೋಟಿ ಅನುದಾನ
* ಎಲಿವೇಟೆಡ್ ಕಾರಿಡಾರ್ ಯೋಜನೆಗೆ ₹ 1,000 ಕೋಟಿ
* 5 ಲಕ್ಷ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗಿ ಪರಿವರ್ತನೆ
* ಕಮರ್ಷಿಯಲ್ ಸ್ಟ್ರೀಟ್ ಹಾಗೂ ಬ್ರಿಗೇಡ್ ರಸ್ತೆಗಳನ್ನು ಪಾದಚಾರಿ ರಸ್ತೆಗಳನ್ನಾಗಿ ಪರಿವರ್ತಿಸಲು ಕ್ರಮ
* ಕೆಪಿಸಿಎಲ್ ವತಿಯಿಂದ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಡಿ 400 ಮೆಟ್ರಿಕ್ ಟನ್ ಸಾಮರ್ಥ್ಯದ ಘನ ತ್ಯಾಜದಿಂದ ವಿದ್ಯುತ್ ಉತ್ಪಾದನೆ ಮಾಡುವ ಘಟಕ ಸ್ಥಾಪನೆ
* ಪಾರ್ಕಿಂಗ್ ನಿಯಮ ಮತ್ತು ಅನುಷ್ಠಾನ ಯೋಜನೆಯ ನೀತಿ ಜಾರಿ. 10 ಸಾವಿರ ವಾಹನಗಳ ನಿಲುಗಡೆಗೆ 87 ಆಯ್ದ ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ
* ₹ 195 ಕೋಟಿ ವೆಚ್ಚದಲ್ಲಿ ಹೆಬ್ಬಾಳ ಮತ್ತು ಕೆ.ಆರ್.ಪುರ ಮೇಲುಸೇತುವೆಗಳಲ್ಲಿ ಹೆಚ್ಚುವರಿ ಲೂಪ್ ನಿರ್ಮಾಣ. ಗೊರಗುಂಟೆ ಪಾಳ್ಯದಲ್ಲಿ ಹೊಸ ಅಂಡರ್ ಪಾಸ್ ನಿರ್ಮಾಣ
* ₹ 23,093 ಕೋಟಿ ಅಂದಾಜು ಮೊತ್ತದ ಬೆಂಗಳೂರು ಉಪ ನಗರ ರೈಲು ಸೇವೆ ಯೋಜನೆಗೆ ಚಾಲನೆ ನೀಡಲಾಗಿದೆ. ವಿಶೇಷ ಉದ್ದೇಶಿತ ವಾಹಕ, ಬೆಂಗಳೂರು ಮೂಲ ಸೌಕರ್ಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದೊಂದಿಗೆ ಅನುಷ್ಠಾನಗೊಳಿಸಲು ಕ್ರಮ
* ಹೆಬ್ಬಾಳ, ಬೈಯಪ್ಪನಹಳ್ಳಿ, ಕೆ.ಆರ್.ಪುರ, ಕಾಡುಗೋಡಿ, ಚಲ್ಲಘಟ್ಟ ಮತ್ತು ಪೀಣ್ಯ ಪ್ರದೇಶಗಳಲ್ಲಿ ಬಹುಮಾದರಿ ಪ್ರಯಾಣ ಹಬ್ ಕಾರ್ಯಸಾಧ್ಯತೆ ಅಧ್ಯಯನ
* ಯಶವಂತಪುರ, ಬನಶಂಕರಿ, ವಿಜಯನಗರ, ಪೀಣ್ಯ ಮತ್ತು ಇತರೆ ಪ್ರದೇಶಗಳಲ್ಲಿ ಮೆಟ್ರೊ ರೈಲು ಮತ್ತು ಟಿಟಿಎಂಸಿಗಳ ಅಂತರರ ಕ್ರಮ ಸಂಯೋಜನೆ ವಿನ್ಯಾಸ ಮತ್ತು ಮೂಲ ಸೌಕರ್ಯ
***
ಮೆಟ್ರೊ ರೈಲು
* ಮೆಟ್ರೊ ಮತ್ತು ಬಸ್ ಸೇವೆಗಳಲ್ಲಿ ಬಳಸಬಹುದಾದ ಚಾಲನೆ ಕಾರ್ಡ್‌ಗಳ ಪ್ರಾರಂಭ
* 3 ಕೋಚ್‌ಗಳಿರುವ ಎಲ್ಲ 50 ರೈಲು ಸೆಟ್‌ಗಳನ್ನು 6 ಕೋಚ್‌ಗಳ ಸೆಟ್‌ಗಳಾಗಿ ಪರಿವರ್ತನೆ
* ಆಯ್ದ 10 ಮೆಟ್ರೊ ನಿಲ್ದಾಣಗಳಲ್ಲಿ ದ್ವಿಚಕ್ರ ವಾಹನಗಳಿಗೆ ವಿದ್ಯುತ್ ಚಾರ್ಜಿಂಗ್ ಸೌಕರ್ಯ
* ಕೊನೆಯ ಮೈಲಿನ ಸಂಪರ್ಕ ಸೇವೆಯಾಗಿ ಆಯ್ದೆ 10 ಮೆಟ್ರೊ ನಿಲ್ದಾಣಗಳಲ್ಲಿ ಬಿಎಂಟಿಸಿ ಇಂದ ಸಣ್ಣ ಸಾಮರ್ಥ್ಯದ ಬಸ್‌ಗಳ ಸೌಲಭ್ಯ
* ಯಶವಂತಪುರದಲ್ಲಿ ರೈಲ್ವೆ ಮತ್ತು ಮೆಟ್ರೊ ನಿಲ್ದಾಣಗಳ ನಡುವೆ ಪಾದಚಾರಿ ಮೇಲ್ಸೇತುವೆ ನಿರ್ಮಾಣ
* ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್.ಪುರಂ ಮತ್ತು ಹೆಬ್ಬಾಳ ಮಾರ್ಗವಾಗಿ ಹೊರ ವರ್ತುಲ ರಸ್ತೆ– ವಿಮಾನ ನಿಲ್ದಾಣ ಮಾರ್ಗ ನಿರ್ಮಾಣ– ₹16,579 ಕೋಟಿ ಅನುದಾನ
* ಕೆಂಗೇರಿ ಮೆಟ್ರೊ ಜಾಲದ ಪಶ್ಚಿಮ ತುದಿ ವಿಸ್ತರಿಸಿ ಚಲ್ಲಘಟ್ಟದಲ್ಲಿ ಹೆಚ್ಚುವರಿ ನಿಲ್ದಾಣ ಸ್ಥಾಪಿಸಲಾಗುವುದು.
***
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
* ₹ 17,200 ಕೋಟಿ ವೆಚ್ಚದ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ₹ 1,000 ಕೋಟಿ
***
ಜಲಮಂಡಳಿ
* ಬೆಂಗಳೂರಿನ ಜಲ ಸಂಪನ್ಮೂಲ ಬಳಸಿ ಅರ್ಕಾವತಿ, ದಕ್ಷಿಣ ಪಿನಾಕಿನಿ ನದಿಗಳಲ್ಲಿ ಮತ್ತೆ ನೀರು ಹರಿಸುವ ಯೋಜನೆ. ಇದಕ್ಕೆ ₹ 50 ಕೋಟಿ
* ಜೈಕಾ ನೆರವಿನೊಂದಿಗೆ ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತ (₹ 5550 ಕೋಟಿ) ಅನುಷ್ಠಾನಕ್ಕೆ ₹ 500 ಕೋಟಿ
* ನಗರದ 914 ಸ್ಥಳಗಳಲ್ಲಿ ಮಳೆನೀರು ಚರಂಡಿಗೆ ತ್ಯಾಜ್ಯ ನೀರು ಸೇರುವುದನ್ನು ತಡೆಗಟ್ಟಲು 2 ವರ್ಷಗಳಲ್ಲಿ ₹ 76.55 ಕೋಟಿ
***
ವಸತಿ
* ಬಿಬಿಎಂಪಿಯ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ₹ 300 ಕೋಟಿ ವೆಚ್ಚದಲ್ಲಿ ಎಸ್.ಸಿ, ಎಸ್.ಟಿ ಪಂಗಡದವರು ಹೆಚ್ಚಾಗಿ ವಾಸಿಸುತ್ತಿರುವ ಅಧಿಸೂಚಿತ ಕೊಳಗೇರಿ ಪ್ರದೇಶಗಳ ಅಭಿವೃದ್ಧಿ
* ಆಟೊ ಚಾಲಕರು, ಟ್ಯಾಕ್ಸಿ ಚಾಲಕರಿಗೆ ₹ 50 ಕೋಟಿ ವೆಚ್ಚದಲ್ಲಿ ‘ಸಾರಥಿಯ ಸೂರು’ ವಾಡಿಗೆ ಆಧಾರದ ವಸತಿ ಯೋಜನೆ
***
* ಬೆಂಗಳೂರಿನ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯಲ್ಲಿ ಕ್ರೀಡಾ ರೋಗಿಗಳ ವಿಭಾಗ ಪ್ರಾರಂಭ ಹಾಗೂ ರೋಬೊಟಿಕ್ ಶಸ್ತ್ರ ಚಿಕಿತ್ಸೆ ಸೌಲಭ್ಯ ಒದಗಿಸಲು ₹ 10 ಕೋಟಿ
***
* ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದಲ್ಲಿ ‘ಹೊಸ ಪೀಳಿಗೆ ಉನ್ನತ ಶಿಕ್ಷಣ’ ಕಾರ್ಯಕ್ರಮದ ಮೂಲಕ ಉನ್ನತ ಶಿಕ್ಷಣದಲ್ಲಿ ಹೊಸ ಕಲಿಕೆಯ ವಿಧಾನಗಳ ಅಳವಡಿಕೆ. ಇದಕ್ಕಾಗಿ ಮುಖ್ಯಮಂತ್ರಿಗಳ ನೇತೃತ್ವದ ಸಮಿತಿ ರಚನೆ
***
* ಬೆಂಗಳೂರು ನಗರದಲ್ಲಿ ಸಂವಿಧಾನ ಮ್ಯೂಸಿಯಂ ಸ್ಥಾಪಿಸಲು ₹ 20 ಕೋಟಿ
***
* ನಾಡಪ್ರಭು ಕೆಂಪೇಗೌಡ ಅಭಿವೃದ್ದಿ ಪ್ರಾಧಿಕಾರಕ್ಕೆ ₹ 5 ಕೋಟಿ
* ಜಾನಪದ ಜಾತ್ರೆಗೆ ಮರುಚಾಲನೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಾನಪದ ಜಾತ್ರೆ ಏರ್ಪಡೆಲು ₹ 2 ಕೋಟಿ
* ದೊಡ್ಡಬಿದರಕಲ್ಲು ಬಳಿ ಕಾವೇರಿ ಎಂಪೋರಿಯಂ ಒಡೆತನದ ಜಾಗದಲ್ಲಿ ಕಲಾಗ್ರಾಮ ನಿರ್ಮಿಸಿ, ಕರಕುಶಲಕರ್ಮಿಗಳಿಗೆ ಉತ್ತೇಜನ ನೀಡಲು ಹಾಗೂ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ದಿ ಪಡಿಸಲು ₹ 10 ಕೋಟಿ
* ಬೆಂಗಳೂರು ನಗರದಲ್ಲಿ 8 ಹೊಸ ಸೈಬರ್ ಎಕನಾಮಿಕ್ ನಾರ್ಕೋಟಿಕ್ ವಿಂಗ್ ಪ್ರಾರಂಭಿಸಲು ₹ 4 ಕೋಟಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.