ADVERTISEMENT

ಸರ್ಕಾರದ ಸಂಖ್ಯಾಬಲ 138 ಆಗಿದೆ, ಬೇರೆ ಲೆಕ್ಕಾಚಾರದ ಬಗ್ಗೆ ಮಾತನಾಡುವುದಿಲ್ಲ: ಡಿಕೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2024, 9:55 IST
Last Updated 23 ನವೆಂಬರ್ 2024, 9:55 IST
<div class="paragraphs"><p>ಡಿ.ಕೆ ಶಿವಕುಮಾರ್</p></div>

ಡಿ.ಕೆ ಶಿವಕುಮಾರ್

   

- ಫೇಸ್‌ಬುಕ್ ಚಿತ್ರ

ಬೆಂಗಳೂರು: ‘ನಮ್ಮ ಸರ್ಕಾರದ ಸಂಖ್ಯಾಬಲ 138ಕ್ಕೆ ಏರಿದೆ: 'ಈಗ ನಮ್ಮ ಸರ್ಕಾರದ ಸಂಖ್ಯಾಬಲ 138 ಆಗಿದೆ. ಇನ್ನು ಬೇರೆ ಲೆಕ್ಕಾಚಾರದ ಬಗ್ಗೆ ಈಗ ಮಾತನಾಡುವುದಿಲ್ಲ' ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಾತನಾಡಿದ ಅವರು, 'ಈ ಗೆಲುವಿಗೆ ಗ್ಯಾರಂಟಿ ಯೋಜನೆಗಳು, ಸಿದ್ದರಾಮಯ್ಯ ಅವರ ನಾಯಕತ್ವ ಹಾಗೂ ನಮ್ಮ ಕಾರ್ಯಕರ್ತರು ಮತ್ತು ಶಾಸಕರ ಪರಿಶ್ರಮ ಕಾರಣ. ಅವರ ಹಗಲು ರಾತ್ರಿ ಶ್ರಮಿಸಿದ್ದರ ಫಲ ಇದು. ಇಲ್ಲಿ ನಾನು ಹಾಗೂ ಸಿದ್ದರಾಮಯ್ಯ ಅವರಷ್ಟೇ ಮುಖ್ಯವಲ್ಲ. ಈ ತೀರ್ಪನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಆಡಳಿತ ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.

ಈ ಫಲಿತಾಂಶ ದೇವೇಗೌಡ ಕುಟುಂಬದ ಕುಸಿತದ ಆರಂಭವೇ ಎಂದು ಕೇಳಿದಾಗ, 'ನಾನು ಈ ಫಲಿತಾಂಶವನ್ನು ಈ ರೀತಿ ಬಣ್ಣಿಸುವುದಿಲ್ಲ. ಜನ ತೀರ್ಪು ಕೊಟ್ಟಿದ್ದಾರೆ. ಮಾಧ್ಯಮಗಳು ಹೇಗೆ ವ್ಯಾಖ್ಯಾನ ಮಾಡಬೇಕೋ ಮಾಡಿ' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.