ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ ಅವರ ನಾಮಪತ್ರ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ತಿರಸ್ಕೃತಗೊಂಡಿದೆ.
220 ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಶುಕ್ರವಾರ ಪೂರ್ಣಗೊಂಡಿತ್ತು. ತಕರಾರುಗಳಿದ್ದ ಕಾರಣ ಶಿವಾಜಿ
ನಗರ, ಔರಾದ್, ಸವದತ್ತಿ– ಯಲ್ಲಮ್ಮ ಹಾಗೂ ಹಾವೇರಿ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿತ್ತು. ತಕರಾರುಗಳ ಕುರಿತು ವಿಚಾರಣೆ ನಡೆಸಿ, ತೀರ್ಮಾನ ಪ್ರಕಟಿಸಿದ ಚುನಾವಣಾಧಿಕಾರಿಗಳು ಈ ಎಲ್ಲ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆಯನ್ನು ಶನಿವಾರ ಪೂರ್ಣಗೊಳಿಸಿದರು.
ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಂಜುನಾಥ ಅವರ ಹೆಸರು ಮತದಾರರ ಪಟ್ಟಿಯಲ್ಲೇ ಇಲ್ಲ. ಈ ಕಾರಣದಿಂದ ಅವರ ನಾಮಪತ್ರ ತಿರಸ್ಕರಿಸಲಾಗಿದೆ. ಮಂಜುನಾಥ ಮತದಾರರ ಪಟ್ಟಿಗೆ ಹೆಸರು ಸೇರಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಪಟ್ಟಿಯಲ್ಲಿ ಹೆಸರು ಸೇರಿರುವುದನ್ನು ಖಚಿತಪಡಿಸಿಕೊಂಡಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
ರತ್ನಾ ಮಾಮನಿ ನಾಮಪತ್ರ ಅಂಗೀಕಾರ: ಸವದತ್ತಿ–ಯಲ್ಲಮ್ಮ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರದ ಕುರಿತು ತಕರಾರು ಸಲ್ಲಿಕೆಯಾಗಿತ್ತು. ವಿಚಾರಣೆ ನಡೆಸಿದ ಚುನಾವಣಾಧಿ
ಕಾರಿ ನಾಮಪತ್ರ ಸ್ವೀಕರಿಸಿದರು. ಅದೇ ಕ್ಷೇತ್ರದಲ್ಲಿ ಪಕ್ಷೇತರರೊಬ್ಬರ ನಾಮಪತ್ರ ಹಾಗೂ ಹಾವೇರಿ ಕ್ಷೇತ್ರದಲ್ಲಿ ಒಂಬತ್ತು ನಾಮಪತ್ರಗಳು ತಿರಸ್ಕೃತಗೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.