ADVERTISEMENT

ಕೆಇಎ: ಪ್ರಾಂಶುಪಾಲರ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2023, 23:30 IST
Last Updated 20 ಡಿಸೆಂಬರ್ 2023, 23:30 IST
ಕೆಇಎ
ಕೆಇಎ   

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲರ ಹುದ್ದೆಗಳಿಗೆ ಆಯ್ಕೆಯಾದವರ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ರಾತ್ರಿ ಪ್ರಕಟಿಸಿದೆ.

ಒಟ್ಟು 812 ಮಂದಿಯ ಮೆರಿಟ್ ಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಸಮಯ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದೇ ರೀತಿಯ ಅಂಕ ಮತ್ತು ಒಂದೇ ರೀತಿಯ ಜನ್ಮ ದಿನಾಂಕ ಇರುವವರು ಹಲವರು ಇದ್ದು ಅಂತಹವರಿಗೆ ರ‍್ಯಾಂಕ್ ನೀಡುವುದು ಕಷ್ಟ ಆಗಿದೆ.‌ ಹೀಗಾಗಿ ಈ ವಿಷಯದಲ್ಲಿ ಯಾವ ರೀತಿಯ ಕ್ರಮಗಳನ್ನು‌ ಕೈಗೊಳ್ಳಬೇಕು ಎಂಬುದರ ಬಗ್ಗೆ ಸರ್ಕಾರದಿಂದ ಸಲಹೆ ಪಡೆಯಲಾಗುವುದು ಎಂದು ಅವರು ವಿವರಿಸಿದ್ದಾರೆ.

ADVERTISEMENT

ಒಟ್ಟು 64 ಅಂಕ ಪಡೆದವರು ಮೆರಿಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ.‌ ಕಲ್ಯಾಣ ಕರ್ನಾಟಕ ಕೋಟಾದಲ್ಲಿ 56 ಅಂಕ ಪಡೆದವರು ಮೆರಿಟ್ ಪಟ್ಟಿಯಲ್ಲಿ ಮೊದಲಿಗರಾಗಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30ರಂದು ಲಿಖಿತ ಪರೀಕ್ಷೆ ‌ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.