ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳನ್ನು ಆಹ್ವಾನಿಸಿದೆ.
2020ರ ಜನವರಿ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಮುದ್ರಣಗೊಂಡಿರುವ 150 ಪುಟಗಳಿಗೂ ಹೆಚ್ಚು ಇರುವ ಕೃತಿಗಳನ್ನು ಸಲ್ಲಿಸಬೇಕು. ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ–ವಿಮರ್ಶೆ–ಸಂಶೋಧನೆ ಹಾಗೂ ಜನಪದ ಸಂಕೀರ್ಣ ವಿಭಾಗದಲ್ಲಿನ ಕೃತಿಗಳನ್ನು ಸಲ್ಲಿಸಬೇಕು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.
ಲೇಖಕರು ಅಥವಾ ಪ್ರಕಾಶಕರು ಅಥವಾ ಸಂಪಾದಕರು ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳನ್ನು ದ್ವಿಪ್ರತಿಯೊಂದಿಗೆ ಅಕ್ಟೋಬರ್ 11ರ ಒಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು–560032 ಇವರಿಗೆ ಕಳುಹಿಸಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.