ADVERTISEMENT

ಸಚಿವ ಕೆ.ಎಸ್‌. ಈಶ್ವರಪ್ಪ ಮೈಸೂರಿನಿಂದ ಬೆಂಗಳೂರಿನತ್ತ ದೌಡು

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 4:11 IST
Last Updated 13 ಏಪ್ರಿಲ್ 2022, 4:11 IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ   

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡಿರುವ ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಪಾಟೀಲ ಅವರಿಗೆ ಲಂಚಕ್ಕೆ ಬೇಡಿಕೆ ಇಟ್ಟು, ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಬುಧವಾರ ಬೆಳಿಗ್ಗೆಯೇ ಮೈಸೂರಿನಿಂದ ಬೆಂಗಳೂರಿನತ್ತ ದೌಡಾಯಿಸುತ್ತಿದ್ದಾರೆ.

ಬಿಜೆಪಿಯ ವಿಭಾಗೀಯ ಮಟ್ಟದ ಸಭೆ ನಡೆಯುತ್ತಿರುವ ಮೈಸೂರಿನ ಲಲಿತ್‌ ಮಹಲ್‌ ಪ್ಯಾಲೇಸ್‌ನಲ್ಲಿ ಈಶ್ವರಪ್ಪ ಇದ್ದರು. ಮಂಗಳವಾರದಿಂದ ಬಿಜೆಪಿಯ ಹಲವು ನಾಯಕರು ಅಲ್ಲಿ ವಾಸ್ತವ್ಯ ಹೂಡಿದ್ದರು. ಬುಧವಾರ ಬೆಳಿಗ್ಗೆ ಉಪಾಹಾರ ಸೇವನೆ ಬಳಿಕ ಈಶ್ವರಪ್ಪ ಅವರಿಗೆ ಮೊಬೈಲ್‌ ಕರೆಯೊಂದು ಬಂದಿದೆ. ಆ ಬಳಿಕ ಅವರು ದಿಢೀರನೆ ಕಾರಿನಲ್ಲಿ ಬೆಂಗಳೂರಿನತ್ತ ಹೊರಟಿದ್ದಾರೆ.

ಮೊಬೈಲ್‌ ಕರೆ ಬರುತ್ತಿದ್ದಂತೆಯೇ ಹೋಟೆಲ್‌ನ ಪ್ರಾಂಗಣದಲ್ಲಿ ದೂರ ನಡೆದು ಹೋದ ಈಶ್ವರಪ್ಪ, ಹತ್ತು ನಿಮಿಷಗಳಿಗೂ ಹೆಚ್ಚು ಕಾಲ ಒಬ್ಬರೇ ನಿಂತು ಮಾತಾಡಿದರು. ನಂತರ ಮರಳಿ ಬಂದು ಕಾರು ಹತ್ತಿ ಬೆಂಗಳೂರಿನತ್ತ ಹೊರಟರು.

ADVERTISEMENT

ಬಿಜೆಪಿಯ ವಿಭಾಗ ಮಟ್ಟದ ಸಭೆ ಬುಧವಾರ ಇಡೀ ದಿನ ನಡೆಯಬೇಕಿದೆ. ಆದರೆ, ದಿಢೀರನೆ ಈಶ್ವರಪ್ಪ ವಾಪಸಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ನೇರವಾಗಿ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಾಗಿರುವುದರಿಂದ ಅವರು ರಾಜೀನಾಮೆ ನೀಡಬಹುದು ಮಾತು ಬಿಜೆಪಿಯೊಳಗೆ ಹರಿದಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.