ಬೆಂಗಳೂರು: ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆ ಹಾನಿ ಕುರಿತು ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ) ವಿಡಿಯೊ ಸಂವಾದ ನಡೆಸಿದರು.
ಮಳೆಯಿಂದಾಗಿ ಉಂಟಾಗಿರುವ ನಷ್ಟದ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಸಂವಾದ ನಡೆಸಿ ಮಾಹಿತಿ ಪಡೆದರು.
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವರ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಲಾಡ್ , ಮುಖ್ಯ ಸಚೇತಕರಾದ ಅಶೋಕ ಪಟ್ಟಣ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ , ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.