ಬೆಂಗಳೂರು: ರಾಜ್ಯದ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಯಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವ ಮಂಜು ಬೀಳಲಿದೆ ಎಂದು ಹೇಳಿದೆ.
ಗುರುವಾರ ಬೆಳಿಗ್ಗೆ 8.30ಕ್ಕೆ ಒಳಗೊಂಡಂತೆ ವಿಜಯನಗರದ ಹರಪನಹಳ್ಳಿಯಲ್ಲಿ 5 ಸೆಂ.ಮೀ, ಹಾವೇರಿಯಲ್ಲಿ 4 ಸೆಂ.ಮೀ ಮಳೆ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.