ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ವಿ. ನಾಮಪತ್ರ ಸಲ್ಲಿಸಲು ರಾಜರಾಜೇಶ್ವರಿನಗರ ಬಿಬಿಎಂಪಿ ಕಚೇರಿ ತಲುಪಿದರು.
ಮುನಿರತ್ನ ಅವರೊಂದಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಕಂದಾಯ ಸಚಿವ ಆರ್.ಅಶೋಕ ಇದ್ದರು. ಕೃಷ್ಣಮೂರ್ತಿ ಅವರೊಂದಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತು ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಇದ್ದಾರೆ.
ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇದೇ 16 ಕೊನೆಯ ದಿನವಾಗಿದೆ. ಐಎಎಸ್ ಅಧಿಕಾರಿ ದಿವಂಗತ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ಆರ್.ಆರ್.ನಗರ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಸಿದ್ದರಾಮಯ್ಯ ಇದ್ದರು.
ಶಿರಾ ಕ್ಷೇತ್ರ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.