ADVERTISEMENT

ರಾಜ್ಯದಲ್ಲಿ ಭಾರಿ ಗಾಳಿ–ಮಳೆ ಮುಂದುವರಿಯುವ ಸಾಧ್ಯತೆ: ಹವಾಮಾನ ಇಲಾಖೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 15:33 IST
Last Updated 4 ಜುಲೈ 2024, 15:33 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ರಾಜ್ಯದ ಕೆಲವೆಡೆ ಶುಕ್ರವಾರವೂ ಭಾರಿ ಗಾಳಿ–ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ತಲಾ ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ.

ADVERTISEMENT

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಇದೇ 8ರವರೆಗೂ ಕರಾವಳಿ, ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.