ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘ ನೀಡುವ 2024ನೇ ಸಾಲಿನ ‘ಇಂದಿರಾರತ್ನ ಪ್ರಶಸ್ತಿ’ಗೆ ಕನ್ನಡ ಪರ ಹೋರಾಟಗಾರ್ತಿ ಹಾಗೂ ಅನುವಾದಕಿ ಮಲರ್ ವಿಳಿ ಕೆ. ಅವರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹5 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಇದೇ 27ರಂದು ಸೌತ್ ಎಂಡ್ ಸರ್ಕಲ್‌ನಲ್ಲಿರುವ ಸುರಾನ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಪ್ರಶಸ್ತಿ ಪ್ರದಾನ ಮಾಲಿದ್ದಾರೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನುವಾದಕರಾಗಿರುವ ಮಲರ್ ವಿಳಿ ಕೆ. ಅವರು ಕಾಲೇಜು ಮತ್ತಿತರ ಕಡೆಗಳಲ್ಲಿ ಕನ್ನಡ ಸಂಘಗಳನ್ನು ಕಟ್ಟಿ, ಕನ್ನಡ ಭಾಷೆಯನ್ನು ಪ್ರಚುರಪಡಿಸುತ್ತಿದ್ದಾರೆ. ಕನ್ನಡದಿಂದ ತಮಿಳಿಗೆ ಹಾಗೂ ತಮಿಳಿನಿಂದ ಕನ್ನಡಕ್ಕೆ ಹಲವು ಕೃತಿಗಳನ್ನು ಅನುವಾದಿಸಿದ್ದಾರೆ. ಮಲರ್ ವಿಳಿ ಅವರ ಈ ಎಲ್ಲ ಕಾರ್ಯಗಳನ್ನು ಗುರುತಿಸಿ, ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.