ADVERTISEMENT

ವನಮಾಲಾ ವಿಶ್ವನಾಥಗೆ ಕಸಾಪ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 16:04 IST
Last Updated 18 ಅಕ್ಟೋಬರ್ 2024, 16:04 IST
ವನಮಾಲಾ ವಿಶ್ವನಾಥ
ವನಮಾಲಾ ವಿಶ್ವನಾಥ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಟಿ.ಗಿರಿಜಾ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕಿ ವನಮಾಲಾ ವಿಶ್ವನಾಥ ಆಯ್ಕೆಯಾಗಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 15 ಸಾವಿರ ನಗದು ಒಳಗೊಂಡಿದೆ. ಲೇಖಕಿ ಟಿ.ಗಿರಿಜಾ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಈ ಪ್ರಶಸ್ತಿಯನ್ನು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಮಹಿಳಾ ಸಾಹಿತಿಗಳಿಗೆ ಪ್ರತಿ ವರ್ಷ ನೀಡಲಾಗುತ್ತಿದೆ. 

ವನಮಾಲಾ ವಿಶ್ವನಾಥ ಅವರು ಭಾರತೀಯ ವಿಜ್ಞಾನ ಸಂಸ್ಥೆ ಸೇರಿ ವಿವಿಧೆಡೆ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ನಡುವಿನ ಕೊಂಡಿಯಾಗಿರುವ ಅವರು, ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಸೇರಿ ಪ್ರಮುಖ ಕೃತಿಗಳನ್ನು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಅನ್ಯ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದಿದ್ದಾರೆ ಎಂದು ಕಸಾಪ ಪ್ರಕಟಣಾ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.