ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಸ್ಮರಣೆಗಾಗಿ ಕನ್ನಡ ಪರಂಪರೆ ಮತ್ತು ಸಂಸ್ಕೃತಿಯನ್ನು ಸ್ಮರಿಸುವ ಉತ್ಸವ ದುಬೈನಲ್ಲಿ ಭಾನುವಾರ ಅದ್ಧೂರಿಯಾಗಿ ನೆರವೇರಿತು.
ದುಬೈನ ಕನ್ನಡ ಒಕ್ಕೂಟಗಳು ಮತ್ತು ದುಬೈ ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಕನ್ನಡಿಗರು ಮತ್ತು ರಾಜ್ಯದ ಅತಿಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮ ಉದ್ಘಾಟಿಸಿದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ‘ಕನ್ನಡಿಗರ ಏಕತೆಯ ಪ್ರತಿಬಿಂಬ ಈ ಉತ್ಸವ. ಕನ್ನಡ ನಾಡು ಮತ್ತು ಭಾವೈಕ್ಯತೆಯನ್ನು ಜಾಗೃತಗೊಳಿಸುವ ಮಹತ್ವದ ಕಾರ್ಯವಾಗಿದೆ. ಈ ಉತ್ಸವ ಕೆಂಪೇಗೌಡರ ಆದರ್ಶಗಳನ್ನು ಸ್ಮರಿಸುವ ಮತ್ತು ಪ್ರೇರಣೆ ಮಾಡುವ ಕೆಲಸ ಮಾಡಲಿದೆ’ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯದ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್, ಶಾಸಕರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ರವಿಕುಮಾರ್ ಗಣಿಗ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಚಿತ್ರನಟ ಉಪೇಂದ್ರ ಭಾಗವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಸಂಘಟಕ ಕಿರಣ್ ಗೌಡ, ‘ನಮ್ಮ ಪರಂಪರೆ, ಸಂಸ್ಕೃತಿ ಮತ್ತು ಕೆಂಪೇಗೌಡರ ಆದರ್ಶಗಳನ್ನು ಮುಂದಿನ ತಲೆಮಾರಿಗೂ ಪರಿಚಯಿಸಲು ಈ ಉತ್ಸವ ಮಾದರಿಯಾಗಿದೆ’ ಎಂದು ಸಂತಸ ವ್ಯಕ್ತಪಡಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ, ನೃತ್ಯ ಪ್ರದರ್ಶನಗಳು ನಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.