ADVERTISEMENT

ಕೆಜೆವಿಎಸ್‌: ಆನ್‌ಲೈನ್‌ ರಸಪ್ರಶ್ನೆ ಸ್ಪರ್ಧೆ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2024, 15:40 IST
Last Updated 1 ಸೆಪ್ಟೆಂಬರ್ 2024, 15:40 IST
ಸಿಂಚನಾ ಪಾಟೀಲ
ಸಿಂಚನಾ ಪಾಟೀಲ   

ಬೆಂಗಳೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ(ಕೆಜೆವಿಎಸ್‌) ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯ ಚಳವಳಿಗೆ ಸಂಬಂಧಿಸಿದಂತೆ ಪ್ರೌಢಶಾಲಾ ಮಕ್ಕಳಿಗಾಗಿ ಏರ್ಪಡಿಸಿದ್ದ ಆನ್‌ಲೈನ್‌ ರಸಪ್ರಶ್ನೆ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ.

ವಿಜಯಪುರ ಜಿಲ್ಲೆ ತಾಳಿಕೋಟೆಯ ಬ್ರಿಲಿಯಂಟ್‌ ಇಂಗ್ಲಿ‌ಷ್ ಮಾಧ್ಯಮ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಪಾಟೀಲ, ಕೋಲಾರದ ಬೆಂಗಳೂರು ಮಾಂಟೆಸ್ಸರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಲಿಖಿತ್ ಸ್ವರೂಪ್ ಪ್ರಥಮ ಬಹುಮಾನ ಪಡೆದಿದ್ದಾರೆ.

ವಿಜಯಪುರದ ಸಮನ್ವಯ ಇಂಗ್ಲಿಷ್ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಸ್ನೇಹಾ ಗೌತಮ್‌ ಆರೆ ಹಾಗೂ ರಾಯಚೂರಿನ ರೈಲ್ವೆ ಸ್ಟೇಷನ್‌ ರಸ್ತೆಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ಸಕೀನಾ ಬೇಗಂ ದ್ವಿತೀಯ ಬಹುಮಾನ ಪಡೆದಿದ್ದಾರೆ.

ADVERTISEMENT

ಕೋಲಾರದ ಖಾದ್ರಿಪುರ ಅಮರಜ್ಯೋತಿ ಪಬ್ಲಿಕ್ ಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿನಿ ನಯನಾ ಎಂ, ಹಾಸನ ಜಿಲ್ಲೆಯ ಹೊಳೆನರಸಿಪುರದ ಪ್ರಿಯದರ್ಶಿನಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಉಷಾ ಎಚ್.ಎನ್ ತೃತೀಯ ಬಹುಮಾನ ಹಾಗೂ 14 ವಿದ್ಯಾರ್ಥಿಗಳು ಸಮಾಧಾನಕರ ಬಹುಮಾನ ಪಡೆದಿದ್ದಾರೆ ಎಂದು ಕೆಜೆವಿಎಸ್‌ ಪ್ರಕಟಣೆ ತಿಳಿಸಿದೆ.

ರಾಜ್ಯದಾದ್ಯಂತ 10 ಸಾವಿರ ವಿದ್ಯಾರ್ಥಿಗಳು ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಪ್ರಥಮ ಬಹುಮಾನ ₹25 ಸಾವಿರ, ದ್ವಿತೀಯ ಬಹುಮಾನ ₹15 ಸಾವಿರ, ತೃತೀಯ ಬಹುಮಾನ ₹10 ಸಾವಿರ ಮತ್ತು ಸಮಾಧಾನಕರ ಬಹುಮಾನ ₹1 ಸಾವಿರ ನಗದನ್ನು ಒಳಗೊಂಡಿವೆ.

ಲಿಖಿತ್ ಸ್ವರೂಪ್
ನಯನಾ ಎಂ.
ಉಷಾ ಎಚ್‌.ಎನ್.
ಸಕೀನಾ ಬೇಗಂ
ಸ್ನೇಹಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.