ಯಲಹಂಕ: ಬಳ್ಳಾರಿ ರಸ್ತೆಯ ಬ್ಯಾಟರಾಯನಪುರದಲ್ಲಿ ಕೋದಂಡರಾಮಸ್ವಾಮಿಯ 75ನೇ ವರ್ಷದ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಬೆಳಿಗ್ಗೆಯಿಂದಲೇ ಸ್ವಾಮಿಗೆ ಅಭಿಷೇಕ ಅರ್ಚನೆ, ಮಹಾನಿವೇದನೆ, ಹೋಮ, ಮಹಾಮಂಗಳಾರತಿ ಪೂಜಾಕೈಂಕರ್ಯ ನಡೆಯಿತು. ಬಳಿಕ ಭಕ್ತರು ‘ಗೋವಿಂದ–ಗೋವಿಂದ’ ಘೋಷಗಳೊಂದಿಗೆ ಸಂಜೆ 4 ಗಂಟೆಗೆ ರಥವನ್ನು ಎಳೆಯಲಾಯಿತು.
ಸುತ್ತಮುತ್ತಲ ಗ್ರಾಮಗಳು, ಬೆಂಗಳೂರು ನಗರ ಸೇರಿ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಸ್ವಾಮಿಯ ದರ್ಶನ ಪಡೆದರು. ಬಾಳೆಹಣ್ಣು ಮತ್ತು ದವನವನ್ನು ರಥದ ಮೇಲೆ ಎಸೆಯುವ ಮೂಲಕ ಹರಕೆ ತೀರಿಸಿದರು.
ಗ್ರಾಮದೇವತೆಗಳಾದ ದೊಡ್ಡಮ್ಮ ಮತ್ತು ಮಹೇಶ್ವರಮ್ಮ ದೇವಿಗೆ ಇದೇ ವೇಳೆ ವಿಶೇಷಪೂಜೆ ನೆರವೇರಿಸಲಾಯಿತು. ಕೋಸಂಬರಿ, ಪಾನಕ ಮತ್ತು ಮಜ್ಜಿಗೆ ವಿತರಣೆಯ ಜೊತೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.