ADVERTISEMENT

ಫೆ. 25ಕ್ಕೆ ಕೋಲಿ ಸಮಾಜದ ಸಮಾವೇಶ: ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2024, 16:00 IST
Last Updated 2 ಫೆಬ್ರುವರಿ 2024, 16:00 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ‘ಕೋಲಿ ಸಮಾಜವು ರಾಜಕೀಯವಾಗಿ, ಸಾಮಾಜಿಕವಾಗಿ ಸಂಘಟಿತವಾಗಲು ಕಲಬುರಗಿಯಲ್ಲಿ ಇದೇ 25ರಂದು ರಾಜ್ಯಮಟ್ಟದ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದರು. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸಮಾವೇಶವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸರ್ಕಾರದ ವಿವಿಧ ಸಚಿವರು ಭಾಗವಹಿಸುತ್ತಾರೆ. ಈ ಸಮಾವೇಶಕ್ಕೂ ಮುನ್ನ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಲಾಗುತ್ತಿದ್ದು, ಸಮಾಜವನ್ನು ಪರಿಣಾಮಕಾರಿಯಾಗಿ ಸಂಘಟನೆ ಮಾಡಲಾಗುತ್ತದೆ. ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ‌ಸಮಾವೇಶದಲ್ಲಿ ನಿರ್ಣಯ ಅಂಗೀಕರಿಸಲಾಗುವುದು’ ಎಂದು ಹೇಳಿದರು.

ADVERTISEMENT

‘ವಿಧಾನಸೌಧದ ಮುಂಭಾಗ ಅಂಬಿಗರ ಚೌಡಯ್ಯ ಪ್ರತಿಮೆಯನ್ನು ಸ್ಥಾಪನೆ ಮಾಡಬೇಕು. ನಮ್ಮ ಸಮುದಾಯದ ಶ್ರೇಯೋಭಿವೃದ್ದಿಗೆ ಬಜೆಟ್‌ನಲ್ಲಿ ₹200 ಕೋಟಿ ಮೀಸಲಿಡಬೇಕು. ನಮ್ಮ ನಿಗಮಕ್ಕೆ ₹ 500 ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕು. ಕೋಲಿ ಸಮಾಜಕ್ಕೆ ಮೀನುಗಾರಿಕೆ ಉದ್ಯಮದಲ್ಲಿ ಶೇ 90ರಷ್ಟು ಮೀಸಲಾತಿ ನೀಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.