ADVERTISEMENT

ಮೀಸಲಾತಿ, ಸಾಮಾಜಿಕ ನ್ಯಾಯಕ್ಕೆ ತೊಂದರೆ ಆಗದಿರಲಿ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 25 ಮೇ 2022, 20:13 IST
Last Updated 25 ಮೇ 2022, 20:13 IST
ಬಿ.ಆರ್.ಲಕ್ಷ್ಮಣ್‌ರಾವ್
ಬಿ.ಆರ್.ಲಕ್ಷ್ಮಣ್‌ರಾವ್   

ಬೆಂಗಳೂರು: ‌‘ನಾವು ಚುನಾವಣೆ ಬೇಡ ಎನ್ನುವುದಿಲ್ಲ. ಆದರೆ, ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯಕ್ಕೆ ತೊಂದರೆ ಆಗಬಾರದು. ಇದು ಸರ್ಕಾರದ ಜವಾಬ್ದಾರಿ. ನ್ಯಾಯಾಲಯ ಚುನಾವಣೆ ನಡೆಸಿ ಎಂದು ಹೇಳಿದೆ. ಆದರೆ, ಸಾಮಾಜಿಕ ನ್ಯಾಯ ಕಡೆಗಣಿಸಿ ಎಂದು ಹೇಳಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರವಾಗಿ ಹೈಕೋರ್ಟ್ ನೀಡಿರುವ ನಿರ್ದೇಶನದ ಕುರಿತು ಬುಧವಾರ ಇಲ್ಲಿ ಈ ಪ್ರತಿಕ್ರಿಯೆ ನೀಡಿದರು.

ಪಠ್ಯಕ್ರಮ ಪರಿಷ್ಕರಣೆ ಗೊಂದಲ ಕುರಿತು ಮಾತನಾಡಿ, ‘ರಾಜಕೀಯ ಕಾರ್ಯಸೂಚಿಯನ್ನು ಪಠ್ಯಕ್ರಮದಲ್ಲಿ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಇತಿಹಾಸ ತಿರುಚಿ, ಮುಂದಿನ ಪೀಳಿಗೆಗೆ ಹೊಸ ಇತಿಹಾಸ ಸೃಷ್ಟಿಸುತ್ತಿದೆ. ಇತಿಹಾಸವನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ಎಲ್ಲ ಪ್ರಯತ್ನಗಳು ಕೆಲಕಾಲ ಮಾತ್ರ. ಸರ್ಕಾರದ ಈ ತಪ್ಪಿಗೆ ಮುಂದಿನ ದಿನಗಳಲ್ಲಿ ಜನರೇ ಶಿಕ್ಷೆ ನೀಡುತ್ತಾರೆ’ ಎಂದೂ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.