ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ ಎನ್ನಲಾದ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ 20 ಮಂದಿ ಆಟಗಾರರರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ, ಬೆಳಗಾವಿ ಫ್ಯಾಂಥರ್ಸ್ ತಂಡದ ಮಾಲೀಕ ಅಲಿ ಅಶ್ಫಾಕ್ ತಾರ್ ಜೊತೆ ಈ ಆಟಗಾರರು ಸಂಪರ್ಕ ಹೊಂದಿದ್ದರು ಎಂಬ ಕಾರಣಕ್ಕೆ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಅಲಿಯನ್ನು ಈಗಾಗಲೇ ಬಂಧಿಸಲಾಗಿದೆ. ಅಲಿ ಜೊತೆ ನಿರಂತರ ಸಂಪರ್ಕದಲ್ಲಿದ್ದ ಇತರೆ 32 ಮಂದಿ ಆಟಗಾರರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದೂ ಗೊತ್ತಾಗಿದೆ.
ಬುಧವಾರ ಬೆಳಿಗ್ಗೆ 11.30ಕ್ಕೆ ಸಿಸಿಬಿ ಕಚೇರಿಗೆ ಬಂದ ಬಳ್ಳಾರಿ, ಬೆಂಗಳೂರು, ಬೆಳಗಾವಿ ತಂಡಗಳ 20ಕ್ಕೂ ಹೆಚ್ಚು ಆಟಗಾರರನ್ನು ಮಧ್ಯಾಹ್ನ 4 ಗಂಟೆವರೆಗೆ ವಿಚಾರಣೆಗೆ ನಡೆಸಲಾಗಿದೆ. ಆ ಮೂಲಕ ಈವರೆಗೂ 40ಕ್ಕೂ ಹೆಚ್ಚು ಮಂದಿ ಆಟಗಾರರನ್ನು ವಿಚಾರಣೆ ಮಾಡಲಾಗಿದೆ ಎಂದೂ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.