ADVERTISEMENT

ಕೆಎಸ್‌ಆರ್‌ಟಿಸಿ ಮುಂಗಡ ಟಿಕೆಟ್‌ ಬುಕ್ಕಿಂಗ್‌ ರದ್ದು

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 21:01 IST
Last Updated 14 ಜುಲೈ 2020, 21:01 IST
   

ಬೆಂಗಳೂರು: ಲಾಕ್‍ಡೌನ್ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆಕೆಎಸ್‍ಆರ್‌ಟಿಸಿ ಬಸ್‌ಗಳ ಸಂಚಾರ ಹಾಗೂ ಬೆಂಗಳೂರಿನಿಂದ ಅಂತರರಾಜ್ಯ ಸಾರಿಗೆ ಸೇವೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಈ ಅವಧಿಯಲ್ಲಿ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹಾಗೂ ಇತರ ಸ್ಥಳಗಳಿಂದ ಬೆಂಗಳೂರಿಗೆ ಬರುವ ಬಸ್‍ಗಳ ಮುಂಗಡ ಟಿಕೆಟ್ ಬುಕ್ಕಿಂಗ್ ರದ್ದು ಮಾಡಲಾಗಿದ್ದು, ಕಾಯ್ದಿರಿಸಿದ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುವುದು. ಜಿಲ್ಲಾಡಳಿತದ ಆದೇಶದನ್ವಯ ಉಳಿದ ಜಿಲ್ಲೆಗಳಲ್ಲಿ ಬಸ್ ಕಾರ್ಯಾಚರಣೆ ಇರಲಿದೆ ಎಂದು ತಿಳಿಸಿದೆ.

ಮಂಗಳವಾರ ರಾತ್ರಿ 8 ಗಂಟೆಯವರೆಗೆ ಬೆಂಗಳೂರಿನಿಂದ 1,300 ಬಸ್‍ಗಳಲ್ಲಿ ಒಟ್ಟು 26 ಸಾವಿರ ಮಂದಿ ಪ್ರಯಾಣಿಸಿದ್ದಾರೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಬಳ್ಳಾರಿ, ಯಾದಗಿರಿ ಜಿಲ್ಲೆಗಳಿಗೆ ಹೆಚ್ಚು ಬಸ್ಸುಗಳು ಕಾರ್ಯಾಚರಣೆ ನಡೆಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.