ADVERTISEMENT

ಚನ್ನಪಟ್ಟಣ: ಪುತ್ರನ ಕಣಕ್ಕಿಳಿಸಲು ಕುಮಾರಸ್ವಾಮಿಯಿಂದ ಚದುರಂಗದಾಟ– DK ಸುರೇಶ್‌

ಮಾಜಿ ಸಂಸದ ಡಿ.ಕೆ. ಸುರೇಶ್‌ ಆರೋಪಿಸಿದರು.

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 11:14 IST
Last Updated 25 ಅಕ್ಟೋಬರ್ 2024, 11:14 IST
<div class="paragraphs"><p>ನಿಖಿಲ್ ಕುಮಾರಸ್ವಾಮಿ, ಡಿ.ಕೆ. ಸುರೇಶ್</p></div>

ನಿಖಿಲ್ ಕುಮಾರಸ್ವಾಮಿ, ಡಿ.ಕೆ. ಸುರೇಶ್

   

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್‌ ಅವರನ್ನು ಚನ್ನಪಟ್ಟಣ ಉಪ ಚುನಾವಣೆಯ ಕಣಕ್ಕೆ ಇಳಿಸಲು ‘ಚದುರಂಗದಾಟ’ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಆರೋಪಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ’ಕುಮಾರಸ್ವಾಮಿ 40 ವರ್ಷಗಳಿಂದ ರಾಜಕೀಯ ತಂತ್ರಗಾರಿಕೆ ಮಾಡಿಕೊಂಡು ಬಂದಿದ್ದಾರೆ. ಲೋಕಸಭೆಗೆ ಆಯ್ಕೆಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನವೇ ನಿಖಿಲ್‌ ಸ್ಪರ್ಧೆ ಖಚಿತವಾಗಿತ್ತು. ಅವರೇ ಮುಂದಿನ ಅಭ್ಯರ್ಥಿ ಎನ್ನುವುದು ಇಡೀ ಚನ್ನಪಟ್ಟಣಕ್ಕೆ ಗೊತ್ತಿತ್ತು. ಈಗ ನಿಖಿಲ್‌ಗೆ ಟಿಕೆಟ್‌ ಕೊಡುವ ಅನಿವಾರ್ಯತೆಯನ್ನು ಕಾಂಗ್ರೆಸ್‌ ಸೃಷ್ಟಿಸಿತು ಎಂದು ನಾಟಕ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು. 

ADVERTISEMENT

‘ಜೆಡಿಎಸ್‌ಗೆ ಕುಮಾರಸ್ವಾಮಿ ಅವರೇ ಅಧಿನಾಯಕ. ಎಲ್ಲವನ್ನೂ ಅವರೇ ತೀರ್ಮಾನಿಸುತ್ತಾರೆ. ಬಲವಂತವಾಗಿ ನಿಖಿಲ್‌ ಅವರನ್ನು ಕಣಕ್ಕೆ ಇಳಿಸುತ್ತಿಲ್ಲ. ಅದೆಲ್ಲ ಪೂರ್ವನಿಗದಿತ. ನಾಮಪತ್ರ ಸಲ್ಲಿಸಿದ ನಂತರ ಇನ್ನಷ್ಟು ನಾಟಕಗಳು ಹೊರಬರುತ್ತವೆ’ ಎಂದರು.

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರು ಚನ್ನಪಟ್ಟಣದಲ್ಲೇ ಇದ್ದು ಪ್ರಚಾರ ನಡೆಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮೊಮ್ಮಗನ ಪರ ಪ್ರಚಾರಕ್ಕೆ ಬರಬೇಡಿ ಎಂದು ಹೇಳಲು ಆಗುತ್ತದೆಯೇ? ಚುನಾವಣೆಯ ಹೊಣೆ ಹೊತ್ತಿದ್ದೇನೆ. ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ. ಪಕ್ಷದ ಸಿದ್ಧಾಂತ ಒಪ್ಪಿದ ಎಲ್ಲರನ್ನೂ ಪಕ್ಷಕ್ಕೆ ಬರಮಾಡಿಕೊಳ್ಳುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.