ADVERTISEMENT

ಲಾಲ್‌ಬಾಗ್‌ ಫಲಪುಷ್ಪ ವೀಕ್ಷಿಸಲು ಜನ ಸಾಗರ

​ಪ್ರಜಾವಾಣಿ ವಾರ್ತೆ
Published 23 ಜನವರಿ 2023, 1:52 IST
Last Updated 23 ಜನವರಿ 2023, 1:52 IST
ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಭಾನುವಾರ ಬಂದ ಜನ ಸಾಗರ –ಪ್ರಜಾವಾಣಿ ಚಿತ್ರ
ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಭಾನುವಾರ ಬಂದ ಜನ ಸಾಗರ –ಪ್ರಜಾವಾಣಿ ಚಿತ್ರ   

ಬೆಂಗಳೂರು: ಗಣರಾಜ್ಯೋತ್ಸವ ಅಂಗ ವಾಗಿ ಲಾಲ್‌ಬಾಗ್‌ ಗಾಜಿನ ಮನೆಯಲ್ಲಿ ಆಯೋಜಿಸಿರುವ ‘ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ’ ವೀಕ್ಷಿಸಲು ಭಾನುವಾರ ಜನ ಸಾಗರವೇ ಹರಿದು ಬಂದಿತ್ತು.

ತೋಟಗಾರಿಕೆ ಇಲಾಖೆ ಏರ್ಪಡಿಸಿದ್ದ ಈ ಪ್ರದರ್ಶನದಲ್ಲಿ ಬೆಂಗಳೂರಿನ 1500 ವರ್ಷಗಳ ಇತಿಹಾಸ ಅನಾವರಣಗೊಳಿಸಲಾಗಿದೆ. ವಾರಾಂತ್ಯದಲ್ಲಿ ವೀಕ್ಷಕರ ಸಂಖ್ಯೆ ಹೆಚ್ಚಾದ್ದರಿಂದ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಮತ್ತು ಪೊಲೀಸರು ಜನರನ್ನು ನಿಯಂತ್ರಿಸಲು
ಹರಸಾಹಸಪಟ್ಟರು.

‘ಭಾನುವಾರ 31,722 ವಯಸ್ಕರು, 3,826 ಮಕ್ಕಳು ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿದರು. ₹24,93,725 ‍ಪ್ರವೇಶ ಶುಲ್ಕ ಸಂಗ್ರಹವಾಗಿದೆ’ ಎಂದು ಲಾಲ್‌ಬಾಗ್‌ ಉದ್ಯಾನದ ಉಪನಿರ್ದೇಶಕಿ ಕುಸುಮಾ ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.