ADVERTISEMENT

ಕಣ್ಣು ಕುಕ್ಕುವ ಎಲ್‌ಇಡಿ ದೀಪ: 1,581 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 20:50 IST
Last Updated 4 ಜುಲೈ 2024, 20:50 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ‘ಕಣ್ಣು ಕುಕ್ಕುವ ಎಲ್‌ಇಡಿ ದೀಪ ಅಳವಡಿಸಿಕೊಂಡ ವಾಹನಗಳ ವಿರುದ್ಧ ರಾಜ್ಯದಾದ್ಯಂತ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 1,518 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ’ ಎಂದು ಸಂಚಾರ ಮತ್ತ ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಕುಮಾರ್ ಹೇಳಿದ್ದಾರೆ. 

ಈ ಬಗ್ಗೆ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ರಾಜ್ಯದಾದ್ಯಂತ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಬೆಂಗಳೂರು ನಗರದಲ್ಲಿ 686, ಕಾರವಾರದಲ್ಲಿ 131, ಮಂಗಳೂರು ನಗರ 96, ರಾಯಚೂರು 93, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕದ ವ್ಯಾಪ್ತಿಯಲ್ಲಿ 92, ಮೈಸೂರು ನಗರ  78ಸೇರಿದಂತೆ ಒಟ್ಟು 1,518 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಾಹನ ಸವಾರರಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಸಹ ಮೂಡಿಸಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.