ADVERTISEMENT

ಕಾನೂನು ನೆರವು: ಉಚಿತ ಶಿಬಿರ ಇಂದು

​ಪ್ರಜಾವಾಣಿ ವಾರ್ತೆ
Published 20 ಜುಲೈ 2024, 20:21 IST
Last Updated 20 ಜುಲೈ 2024, 20:21 IST
ಲೋಕಪಾಲ ನೇಮಕ: ಕೋರ್ಟ್ ಸಲಹೆ ಗಂಭೀರವಾಗಿ ಪರಿಗಣಿಸಿ
ಲೋಕಪಾಲ ನೇಮಕ: ಕೋರ್ಟ್ ಸಲಹೆ ಗಂಭೀರವಾಗಿ ಪರಿಗಣಿಸಿ   

ಬೆಂಗಳೂರು: ಧ್ವನಿ ಲೀಗಲ್‌ ಟ್ರಸ್ಟ್‌ ವತಿಯಿಂದ ಜುಲೈ 21ರಂದು (ಭಾನುವಾರ) ‘ಉಚಿತ ಕಾನೂನು ನೆರವು ಶಿಬಿರ ಮತ್ತು ವಿದ್ಯಾರ್ಥಿನಿಯರಿಗೆ ಕಾನೂನು ಅರಿವು’ ಕಾರ್ಯಕ್ರಮವನ್ನು ಬಾಗಲಗುಂಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ಕೆಲಸದ ಸ್ಥಳದಲ್ಲಿ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಗಂಡನಿಂದ ಜೀವನಾಂಶ ಪಡೆಯುವುದು, ಲೈಂಗಿಕ ಕಿರುಕುಳ, ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲನ್ನು ಪಡೆದುಕೊಳ್ಳುವುದು ಸೇರಿದಂತೆ ಸಿವಿಲ್, ಕ್ರಿಮಿನಲ್‌ ಪ್ರಕರಣಗಳ ವಿಚಾರದಲ್ಲಿ ಕಾನೂನು ಸಲಹೆಗಳನ್ನು ನೀಡಲಾಗುತ್ತದೆ. ಆಸಕ್ತರು ಸಂಬಂಧಪಟ್ಟ ದಾಖಲೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT