ADVERTISEMENT

ಸಹಕಾರ ಸಂಘ ಸದೃಢವಾಗಿ ಬೆಳೆಯಲಿ: ಮಾವಳ್ಳಿ ಶಂಕರ್

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 16:13 IST
Last Updated 23 ಸೆಪ್ಟೆಂಬರ್ 2024, 16:13 IST
ಸಾಕ್ಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಅಧ್ಯಕ್ಷ ಮಾವಳ್ಳಿ ಶಂಕರ್ ಅವರು ಸಂಘದ ವಾರ್ಷಿಕ ವರದಿ ಪುಸ್ತಕ ಬಿಡುಗಡೆ ಮಾಡಿದರು. ಮಹಾಬೋಧಿ ಸೊಸೈಟಿಯ ಭಂತೆಜೀ ಸಹಕಾರ ಸಂಘಗಳ ಇಲಾಖೆಯ ನಿವೃತ್ತ ಹೆಚ್ಚುವರಿ ನಿಬಂಧಕ ಪುಟ್ಟರಾಜು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಾಕ್ಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಅಧ್ಯಕ್ಷ ಮಾವಳ್ಳಿ ಶಂಕರ್ ಅವರು ಸಂಘದ ವಾರ್ಷಿಕ ವರದಿ ಪುಸ್ತಕ ಬಿಡುಗಡೆ ಮಾಡಿದರು. ಮಹಾಬೋಧಿ ಸೊಸೈಟಿಯ ಭಂತೆಜೀ ಸಹಕಾರ ಸಂಘಗಳ ಇಲಾಖೆಯ ನಿವೃತ್ತ ಹೆಚ್ಚುವರಿ ನಿಬಂಧಕ ಪುಟ್ಟರಾಜು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.   

ಕೆ.ಆರ್.ಪುರ: ಸಹಕಾರ ಸಂಘ ಸದೃಢವಾಗಿ ಬೆಳವಣಿಗೆ ಹೊಂದಲು ಸದಸ್ಯರ ನಡುವೆ ಪರಸ್ಪರ ಸಹಕಾರ ಮುಖ್ಯವಾಗುತ್ತದೆ ಎಂದು ಸಾಕ್ಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಅಧ್ಯಕ್ಷ ಮಾವಳ್ಳಿ ಶಂಕರ್ ಹೇಳಿದರು.

ಕೆ.ಆರ್.ಪುರ ಸಮೀಪದ ಎಚ್ಎಎಲ್‌ನ ವಿಮಾನಪುರದಲ್ಲಿ ಹಮ್ಮಿಕೊಂಡಿದ್ದ ಸಾಕ್ಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತದ 2023-24ನೇ ಸಾಲಿನ ಸರ್ವ ಸದಸ್ಯರ ಸಭೆ ಮತ್ತು ಮೊದಲನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಸಹಕಾರ ಸಂಘ ಹೆಮ್ಮರವಾಗಿ ಬೆಳೆಯಲು ನಮ್ಮ ನಡುವೆ ಸಂಬಂಧಗಳು ಗಟ್ಟಿಯಾಗಿರಬೇಕು. ಸಂಘದ ವಿಚಾರದಲ್ಲಿ ಮನಸ್ತಾಪಗಳು ಸಹಜ. ಅವೆಲ್ಲವನ್ನೂ ಸಹಿಸಿಕೊಂಡು ಸಂಘದ ಘನತೆ ಕಾಪಾಡಲು ಶ್ರಮಿಸಬೇಕು. ಸಹಕಾರ ಸಂಘ ಬೆಳೆದರೆ ನಾವು ಅರ್ಥಿಕವಾಗಿ, ಸಾಮಾಜಿಕವಾಗಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ADVERTISEMENT

‘ಸಾಕ್ಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ವತಿಯಿಂದ ಬೆಂಗಳೂರು, ಮಾಲೂರು, ಹೊಸಕೋಟೆ, ಕೋಲಾರ ಭಾಗದಲ್ಲಿ ಬಡಾವಣೆ ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದೇವೆ. ಯೋಜನೆ ಸಿದ್ಧವಾದ ನಂತರ ಕಡಿಮೆ ಬೆಲೆಯಲ್ಲಿ ಸದಸ್ಯರಿಗೆ ನಿವೇಶನ ಹಂಚಿಕೆ ಮಾಡುವ ಆಲೋಚನೆ ಹೊಂದಿದ್ದೇವೆ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಇಲಾಖೆಯ ನಿವೃತ್ತ ಹೆಚ್ಚುವರಿ ನಿಬಂಧಕ ಪುಟ್ಟರಾಜು, ಡಾ.ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಟ್ರಸ್ಟಿ ಡಾ.ಜಿ.ಎನ್.ಉಮೇಶ್, ಉಪಾಧ್ಯಕ್ಷ ಆರ್.ನಾರಾಯಣ್ ಖಜಾಂಚಿ ಮಣಿಪಾಲ್ ರಾಜಪ್ಪ, ನಿರ್ದೇಶಕರಾದ ಮುನಿನಂಜಪ್ಪ, ನಾರಾಯಣಸ್ವಾಮಿ, ವಿ.ಶ್ರೀನಿವಾಸ್ ಚಲಘಟ್ಟ, ಕೆ.ಆರ್.ಮುನಿಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.