ADVERTISEMENT

ಹೆಸರಘಟ್ಟ ಮೀಸಲು ಘೋಷಣೆ ಪ್ರಸ್ತಾವ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 22:11 IST
Last Updated 1 ನವೆಂಬರ್ 2022, 22:11 IST
ಹೆಸರಘಟ್ಟ ಸಂರಕ್ಷಣಾ ಹುಲ್ಲುಗಾವಲು ಪ್ರದೇಶವನ್ನು ಮೀಸಲು ಪ್ರದೇಶವನ್ನಾಗಿ ಘೋಷಣೆ ಮಾಡುವ ಪ್ರಸ್ತಾವನೆಯನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ರೈತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯರು ಹುಲ್ಲುಗಾವಲು ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದರು.
ಹೆಸರಘಟ್ಟ ಸಂರಕ್ಷಣಾ ಹುಲ್ಲುಗಾವಲು ಪ್ರದೇಶವನ್ನು ಮೀಸಲು ಪ್ರದೇಶವನ್ನಾಗಿ ಘೋಷಣೆ ಮಾಡುವ ಪ್ರಸ್ತಾವನೆಯನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ರೈತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯರು ಹುಲ್ಲುಗಾವಲು ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದರು.   

ಯಲಹಂಕ: ಹೆಸರಘಟ್ಟ ಸಂರಕ್ಷಣಾ ಹುಲ್ಲುಗಾವಲು ಪ್ರದೇಶವನ್ನು ಮೀಸಲು ಪ್ರದೇಶವನ್ನಾಗಿ ಘೋಷಣೆ ಮಾಡುವ ಪ್ರಸ್ತಾವನೆಯನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ, ಸ್ಥಳೀಯ ರೈತರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕಾಕೋಳು ಸಮೀಪದ ಕೆ.ಎಂ.ಎಫ್‌ ಗೇಟ್‌ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿ, ಸೊಣ್ಣೇನಹಳ್ಳಿ, ಹೆಸರಘಟ್ಟ, ಶಿವಕೋಟೆ, ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳ ರೈತರು, ರೈತಸಂಘಟನೆಗಳ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ದಲಿತ ಮತ್ತು ಕನ್ನಡಪರ ಸಂಘಟನೆಗಳ ಸದಸ್ಯರು ಹೆಸರಘಟ್ಟದ ಹುಲ್ಲಗಾವಲು ಪ್ರದೇಶದಲ್ಲಿ ಕಾಲ್ನಡಿಗೆ ಜಾಥಾ
ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ಈ ವೇಳೆ ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಮಂಡಳಿ ವಿರುದ್ಧ ಫಲಕ ಗಳನ್ನು ಹಿಡಿದು ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ
ವ್ಯಕ್ತಪಡಿಸಿದರು.

ADVERTISEMENT

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಘಟಕದ ಅಧ್ಯಕ್ಷ ವಿ.ಆರ್.ನಾರಾಯಣರೆಡ್ಡಿ ಮಾತ ನಾಡಿ, ‘ಹುಲ್ಲುಗಾವಲಿನ ಪ್ರದೇಶವು ಪಶುಪಾಲನಾ ಇಲಾಖೆಯ ಸುಪರ್ದಿ ಯಲ್ಲಿರುವ ಜಾಗವಾಗಿದೆ. ಇದು ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗವಾಗಿದೆ ಎಂಬುದರ ಬಗ್ಗೆ ಅಧಿಸೂಚನೆ ಹೊರಡಿಸದೆ ಏಕಾಏಕಿ ಪ್ರಸ್ತಾವನೆ ಸಲ್ಲಿಸಿರುವುದು ಕಾನೂನು ಬಾಹಿರವಾಗಿದೆ. ವನ್ಯಜೀವಿ
(ರಕ್ಷಣೆ) ಕಾಯಿದೆ 1972ರಲ್ಲಿ ವಿಭಾಗ
36ಎ(1)ರಲ್ಲಿ ರಾಜ್ಯ ಸರ್ಕಾರವು ಸ್ಥಳೀಯ
ಸಮುದಾಯಗಳೊಂದಿಗೆ ಸಮಾ ಲೋಚನೆ ನಡೆಸಿಲ್ಲ’ ಎಂದು
ಪ್ರತಿಭಟನಕಾರರು ದೂರಿದರು.

ರಾಷ್ಟ್ರೀಯ ಕಿಸಾನ್ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಶಿವಕೋಟೆ ಆನಂದ್, ಯುವ ಮುಖಂಡ
ಸೀತಕೆಂಪನಹಳ್ಳಿ ಮಧುಕುಮಾರ್ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.