ADVERTISEMENT

ಲೋಕಾಯುಕ್ತ ದಾಳಿ: ಬೆಂಗಳೂರಿನ ಅಧಿಕಾರಿ ಮನೆಯಲ್ಲಿ ₹25 ಲಕ್ಷ ನಗದು, ಚಿನ್ನಾಭರಣ ವಶ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 7:46 IST
Last Updated 19 ಜುಲೈ 2024, 7:46 IST
<div class="paragraphs"><p>ಮೀರ್ ಅತ್ತರ್ ಅಲಿ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿರುವ ₹25 ಲಕ್ಷ ನಗದು ಮತ್ತು ಚಿನ್ನಾಭರಣ</p></div>

ಮೀರ್ ಅತ್ತರ್ ಅಲಿ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿರುವ ₹25 ಲಕ್ಷ ನಗದು ಮತ್ತು ಚಿನ್ನಾಭರಣ

   

ಬೆಂಗಳೂರು: ಬೆಂಗಳೂರು ನಗರದ ಕಾನೂನು ಮಾಪನಶಾಸ್ತ್ರ ಇಲಾಖೆಯ ಉಪ ನಿಯಂತ್ರಕ ಮೀರ್ ಅತ್ತರ್ ಅಲಿ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಸುಮಾರು ₹25 ಲಕ್ಷ ನಗದು ಮತ್ತು ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಕುರಿತು ಬಂದಿದ್ದ 12 ದೂರುಗಳ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 51 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ಶೋಧಕಾರ್ಯ ನಡೆಸಿದ್ದಾರೆ.

ADVERTISEMENT

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಯಾದಗಿರಿ ಮತ್ತು ತುಮಕೂರಿನಲ್ಲಿ ದಾಖಲಾಗಿದ್ದ ದೂರಿನ ಅನ್ವಯ ಈ ಕಾರ್ಯಾಚರಣೆ ನಡೆಸಲಾಗಿದೆ. ಶೋಧಕಾರ್ಯ ಮುಂದುವರೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.