ADVERTISEMENT

ಬೆಂಗಳೂರು: ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ದಾಳಿ

ರೈ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ‌ ಲೋಕಾಯುಕ್ತ ಪೊಲೀಸರು ದಾಳಿ

​ಪ್ರಜಾವಾಣಿ ವಾರ್ತೆ
Published 28 ಜೂನ್ 2023, 2:47 IST
Last Updated 28 ಜೂನ್ 2023, 2:47 IST
ಅಜಿತ್ ಕುಮಾರ್ ರೈ
ಅಜಿತ್ ಕುಮಾರ್ ರೈ    

ಬೆಂಗಳೂರು: ಕೆ.ಆರ್.ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ‌ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಶೋಧ ನಡೆಸುತ್ತಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು ಅಜಿತ್ ಕುಮಾರ್ ರೈ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ. ಲೋಕಾಯುಕ್ತ ಎಸ್ ಪಿ ಕೆ.ವಿ. ಅಶೋಕ್ ನೇತೃತ್ವದಲ್ಲಿ ಅಜಿತ್ ಅವರ ಮನೆ ಹಾಗೂ ಇತರ ಹತ್ತು ಸ್ಥಳಗಳ ಮೇಲೆ ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

ಅಜಿತ್ ಕುಮಾರ್ ಅವರ ಮನೆಯಲ್ಲಿ ಬೃಹತ್ ಪ್ರಮಾಣದ ನಗದು ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ.

ADVERTISEMENT

ಪುತ್ತೂರು ವರದಿ

ಪುತ್ತೂರು: ಕೆ.ಆರ್.ಪುರ ತಹಶೀಲ್ದಾರ್ ಆಗಿರುವ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಅವರು ಪುತ್ತೂರು ತಾಲ್ಲೂಕಿನ ಸೊರಕೆಯಲ್ಲಿ ಹೊಂದಿರುವ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳಿಗೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಸುತ್ತಿದ್ದಾರೆ.

ಅವರ ಮನೆಯಲ್ಲಿ ಭಾರಿ ಪ್ರಮಾಣದ ಹಣ ಸಿಕ್ಕಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು ಅಜಿತ್ ಕುಮಾರ್ ರೈ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.

ಪುತ್ತೂರಿನ ಸರ್ವೆ ಗ್ರಾಮದ ಸೊರಕೆಯವರಾದ ಅಜಿತ್ ಕುಮಾರ್ ರೈ ಈ ಹಿಂದೆ ಒತ್ತುವರಿದಾರರಿಗೆ ಸಹಕರಿಸಿದ್ದ ಆರೋಪದ ಮೇಲೆ ಅಮಾನತುಗೊಳಗಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.