ಬೆಂಗಳೂರು: ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಗೋಪಾಲ ನಗರ ನಿವಾಸಿ ಶೇಷಾದ್ರಿ (23) ಮೃತ ಸವಾರ.
‘ಕೆಲಸ ಮುಗಿಸಿಕೊಂಡು ಶೇಷಾದ್ರಿ ಅವರು ಯಶವಂತಪುರ ಕಡೆಗೆ ರಾತ್ರಿ 10 ಗಂಟೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿ ಚಾಲಕ ದಾಸರಹಳ್ಳಿ ಮೆಟ್ರೋ ನಿಲ್ದಾಣ ಸಮೀಪ ಹಿಂದಿನಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಕೆಳಗೆ ಬಿದ್ದ ಶೇಷಾದ್ರಿ ಮೇಲೆ ಲಾರಿ ಚಕ್ರಗಳು ಹರಿದು ಸ್ಥಳದಲ್ಲಿಯೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾರಿಯನ್ನು ವಶಕ್ಕೆ ಪಡೆದಿದ್ದು, ಚಾಲಕನ ಪತ್ತೆ ಕಾರ್ಯ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.