ADVERTISEMENT

ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಲಕ್ಷಾಂತರ ರೂಪಾಯಿ ನಷ್ಟ: ಮನೆ ತೊರೆದ ಬ್ಯಾಂಕ್ ನೌಕರ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2024, 16:06 IST
Last Updated 12 ಅಕ್ಟೋಬರ್ 2024, 16:06 IST
<div class="paragraphs"><p>ಆನ್‌ಲೈನ್‌ ಟ್ರೇಡಿಂಗ್</p></div>

ಆನ್‌ಲೈನ್‌ ಟ್ರೇಡಿಂಗ್

   

ಬೆಂಗಳೂರು: ಆನ್​ಲೈನ್ ಟ್ರೇಡಿಂಗ್‌ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಬ್ಯಾಂಕ್ ಉದ್ಯೋಗಿಯೊಬ್ಬರು ಸಾಲ ತೀರಿಸಲಾಗದೆ ಮನೆ ಬಿಟ್ಟು ಹೋಗಿದ್ದಾರೆ.

ಮುದ್ದಿನಪಾಳ್ಯ ನಿವಾಸಿ ಭರತ್ ಎಂಬುವರು ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ವಿನಿಯೋಗಿಸಿದ್ದರು. ಇದಕ್ಕಾಗಿ ₹20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ‘ಸಾಲದ ಕಂತು ಪಾವತಿಸಲು ಸಾಧ್ಯವಾಗುತ್ತಿಲ್ಲ’ ಎಂದು ವಿಡಿಯೊ ಮಾಡಿ ನಾಪತ್ತೆಯಾಗಿದ್ದಾರೆ.

ADVERTISEMENT

ಈ ಸಂಬಂಧ ಅವರ ಪತ್ನಿ ಚೈತ್ರಾ ಅವರು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದೂರು ನೀಡಿದ್ದು, ಪತಿಯನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

‘ನಾನು ಜೀವನದಲ್ಲಿ ಸೋತಿದ್ದೇನೆ. ನನ್ನನ್ನು ಹುಡುಕಬೇಡಿ. ಮನೆ ಬಿಟ್ಟು ಹೋಗುತ್ತಿದ್ದೇನೆ’ ಎಂದು ವಿಡಿಯೊ ಮಾಡಿ, ಮೊಬೈಲ್ ಮನೆಯಲ್ಲೇ ಬಿಟ್ಟು ಭರತ್ ತೆರಳಿದ್ದಾರೆ.

‘ಆನ್‌ಲೈನ್‌ನಲ್ಲಿ ಬರುತ್ತಿದ್ದ ಹಣ ದುಪ್ಪಟ್ಟು ಜಾಹೀರಾತುಗಳನ್ನು ನೋಡಿ ಭರತ್ ಹಣ ತೊಡಗಿಸಿದ್ದರು. ಇದಕ್ಕಾಗಿ ಅಂದಾಜು ₹ 20 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು. ಸಾಲಗಾರರು ಮನೆ ಬಳಿ ಬಂದು ಹಣ ನೀಡುವಂತೆ ಪೀಡಿಸುತ್ತಿದ್ದರು ಎಂದು ಅವರ ಪತ್ನಿ ತಿಳಿಸಿದ್ದಾರೆ. ಸಾಲದ ಹಣಕ್ಕೆ ಬಡ್ಡಿ ಕಟ್ಟಲು ಆಗದೆ ಪರದಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

‘ತನ್ನ ಬೈಕ್‌ನೊಂದಿಗೆ ಮನೆಯಿಂದ ಹೊರ ಹೋದ ಎರಡು ದಿನ ಪತ್ನಿ ಜತೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು. ಈಗ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.