ADVERTISEMENT

ಪ್ರೇಮ ವೈಫಲ್ಯ: ಪಿ.ಜಿ. ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 16:24 IST
Last Updated 16 ಅಕ್ಟೋಬರ್ 2024, 16:24 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ಪೇಯಿಂಗ್‌ ಗೆಸ್ಟ್‌ (ಪಿ.ಜಿ) ಕಟ್ಟಡದ 4ನೇ ಮಹಡಿಯಿಂದ ಜಿಗಿದು ಯುವಕ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ವಿಷ್ಣು (28) ಆತ್ಮಹತ್ಯೆ ಮಾಡಿಕೊಂಡವರು. 

ADVERTISEMENT

‘ನಾಲ್ಕು ತಿಂಗಳ ಹಿಂದೆ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಅವರು, ಪಿ.ಜಿಯಲ್ಲಿದ್ದರು. ಬಿಪಿಒ ಕಂಪನಿಯಲ್ಲಿ ಕೆಲಸ ಸಿಕ್ಕಿತ್ತು. ಅವರು ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದು, ಇತ್ತೀಚೆಗೆ ಆಕೆ ವಿಷ್ಣು ಅವರನ್ನು ಕಡೆಗಣಿಸಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಬೇಸತ್ತು ಮಂಗಳವಾರ ತಡರಾತ್ರಿ ಪಿ.ಜಿ. ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಬುಧವಾರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಮೃತದೇಹ ಒಪ್ಪಿಸಲಾಗಿದೆ. ಮರಣಪತ್ರ ಪತ್ತೆ ಆಗಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.