ಕೆ.ಆರ್.ಪುರ: ಮಹದೇವಪುರ ಕ್ಷೇತ್ರದ ಅಭಿವೃದ್ಧಿಗೆ ಕಾರ್ಯಪಡೆಯ (ಟಾಸ್ಕ್ ಫೋರ್ಸ್) ಸದಸ್ಯರ ಶ್ರಮ ಅತ್ಯವಶ್ಯಕವಾಗಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಮಾರತ್ತಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನವಾಗಿ ರಚಿಸಿರುವ ಮಹದೇವಪುರ ಕಾರ್ಯ ಪಡೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಕ್ಷೇತ್ರದ ಅಭಿವೃದ್ಧಿಗೆ ರೂಪಿಸಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ತಮ್ಮೆಲ್ಲರ ಸಹಕಾರ ಅಗತ್ಯವಾಗಿದೆ. ಸ್ಥಳೀಯ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಹಾಗಾಗಿ ಎಲ್ಲಾ ಕಾರ್ಯಪಡೆಯ ಸದಸ್ಯರು ಕಾರ್ಯೋನ್ಮುಖರಾಗಬೇಕು‘ ಎಂದು ತಿಳಿಸಿದರು.
ನಾಲ್ಕು ವರ್ಷಗಳ ಹಿಂದೆ ಕಾರ್ಯಪಡೆಯನ್ನು ರಚಿಸಿ, ಅದು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ನಂತರ, ಈಗ ಜಲಶಕ್ತಿ, ಮೊಬಿಲಿಟಿ ಸೇರಿದಂತೆ ವಿವಿಧ ಒಂಬತ್ತು ಕಾರ್ಯಪಡೆಗಳನ್ನು ರಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ, ರಾಜ್ಯಸಭೆಯ ಮಾಜಿ ಸದಸ್ಯರಾದ ಕೆ. ಸಿ. ರಾಮಮೂರ್ತಿ, ಕುಪೇಂದ್ರ ರೆಡ್ಡಿ, ತಹಸೀಲ್ದಾರ್ ರವಿ ಕುಮಾರ್, ಬಿಜೆಪಿ ಮಹದೇವಪುರ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷ ಮನೋಹರ ರೆಡ್ಡಿ, ಮುಖಂಡರಾದ ನಟರಾಜ್, ಎಲ್. ರಾಜೇಶ್, ಮಹದೇವಪುರ ಕಾರ್ಯಪಡೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.