ADVERTISEMENT

ಮಹದೇವಪುರ ವಲಯದ ಕಂದಾಯ ಅಧಿಕಾರಿ ಬಸವರಾಜ ಮಗಿ ಅಮಾನತು

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2024, 16:07 IST
Last Updated 7 ಅಕ್ಟೋಬರ್ 2024, 16:07 IST
ಬಸವರಾಜ ಮಗಿ
ಬಸವರಾಜ ಮಗಿ   

ಬೆಂಗಳೂರು: ಬಿಬಿಎಂಪಿ ಮಹದೇವಪುರ ವಲಯದ ಕಂದಾಯ ಅಧಿಕಾರಿ ಬಸವರಾಜ ಮಗಿ ಅವರನ್ನು ಅಮಾನತುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಲೋಕಾಯುಕ್ತ ತನಿಖಾಧಿಕಾರಿಗಳು 2024ರ ಜುಲೈ 11ರಂದು ನಡೆಸಿದ ದಾಳಿಯಿಂದ ಬಸವರಾಜ ಮಗಿ ಅವರು ಆದಾಯಕ್ಕಿಂತ ಶೇ 578.59ರಷ್ಟು ಹೆಚ್ಚು ಆಸ್ತಿ ಹೊಂದಿರುವುದು ಪತ್ತೆಯಾಗಿತ್ತು. ಬಸವರಾಜ ಅವರ  ಮನೆ, ಕರ್ತವ್ಯ ನಿರ್ವಹಿಸುತ್ತಿದ್ದ ಕಚೇರಿ, ಕಲಬುರಗಿಯಲ್ಲಿರುವ ಅವರ ಕುಟುಂಬದವರ ಮನೆಗಳು ಸೇರಿದಂತೆ ಒಂಬತ್ತು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು.

₹5.95 ಕೋಟಿಯಷ್ಟು ಅಕ್ರಮ ಸ್ವತ್ತುಗಳನ್ನು ಹೊಂದಿರುವುದು ಪ್ರಾಥಮಿಕ ತನಿಖೆಯಿಂದ ಕಂಡುಬಂದಿದೆ. ತನಿಖೆಗೆ ಹಸ್ತಕ್ಷೇಪ ಮಾಡುವ, ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇರುವುದರಿಂದ ಬಸವರಾಜ ಮಗಿ ಅವರನ್ನು ಅಮಾನತು ಮಾಡಬೇಕು ಎಂದು ಲೋಕಾಯುಕ್ತದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು ನಗರಾಭಿವೃದ್ಧಿ ಇಲಾಖೆಗೆ 2024ರ ಆಗಸ್ಟ್‌ 9ರಂದು ಪ್ರಸ್ತಾವ ಸಲ್ಲಿಸಿದ್ದರು. ಇದನ್ನು ಪರಿಗಣಿಸಿರುವ ನಗರಾಭಿವೃದ್ಧಿ ಇಲಾಖೆ, ಬಸವರಾಜ ಮಗಿ ಅವರನ್ನು ಅಮಾನತುಗೊಳಿಸಿ ಅಕ್ಟೋಬರ್‌ 4ರಂದು ಆದೇಶ ಹೊರಡಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.