ADVERTISEMENT

ಶೂನ್ಯ ತ್ಯಾಜ್ಯ ಕಚೇರಿ ಮಾಡಿ: ತುಷಾರ್‌ ಗಿರಿನಾಥ್‌

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 14:21 IST
Last Updated 3 ಅಕ್ಟೋಬರ್ 2024, 14:21 IST
ತುಷಾರ್‌ ಗಿರಿನಾಥ್‌
ತುಷಾರ್‌ ಗಿರಿನಾಥ್‌   

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಚೇರಿಗಳಲ್ಲಿ ಶೂನ್ಯ ತ್ಯಾಜ್ಯ (ಜೀರೋ ವೇಸ್ಟ್‌) ಅಭಿಯಾನವನ್ನು ಹಮ್ಮಿಕೊಳ್ಳಬೇಕು. ಕಚೇರಿ ಆವರಣದಲ್ಲಿ ಸ್ವಚ್ಛತೆ ಕಾಪಾಡಿ ತ್ಯಾಜ್ಯ ಮುಕ್ತ ಆವರಣವನ್ನಾಗಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿನ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಗುರುವಾರ ವರ್ಚ್ಯುವಲ್ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಶೂನ್ಯ ತ್ಯಾಜ್ಯ ಕಚೇರಿಗಳನ್ನಾಗಿ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕ್ರಮಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಹೇಳಿದರು.

ADVERTISEMENT

ಇದಲ್ಲದೇ ನಗರದಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕು. ರಸ್ತೆ ಬದಿಯಲ್ಲಿ ಕಸ ಬಿಸಾಡುವುದನ್ನು ತಡೆಯಬೇಕು. ಮನೆಗಳ ಬಳಿ ಬರುವ ಆಟೋ ಟಿಪ್ಪರ್‌ಗಳಿಗೆ ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸಿ ನೀಡಲು ನಾಗರಿಕರಲ್ಲಿ ಅರಿವು ಮೂಡಿಸಬೇಕು. ಲಿಂಕ್ ವರ್ಕರ್ಸ್‌ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರು, ಜಂಟಿ ಆಯುಕ್ತರು, ಪ್ರಧಾನ ಎಂಜಿನಿಯರ್‌ಗಳು, ಮುಖ್ಯ ಎಂಜಿನಿಯರ್‌ಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.