ಬೆಂಗಳೂರು: ಪತ್ನಿಯ ಕುತ್ತಿಗೆಯನ್ನು ವೇಲ್ನಿಂದ ಬಿಗಿದು ಕೊಲೆ ಮಾಡಿ, ಪತಿ ಪರಾರಿಯಾಗಿರುವ ಘಟನೆ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗಂಗೊಂಡನಹಳ್ಳಿ ಮೂರನೇ ಮುಖ್ಯರಸ್ತೆ ನಿವಾಸಿ ಗೌಸಿಯಾಬಿ (31) ಕೊಲೆಯಾದ ಗೃಹಿಣಿ. ವೆಲ್ಡಿಂಗ್ ಕೆಲಸ ಮಾಡುವ ಇಮ್ರಾನ್ ಖಾನ್ ಅವರನ್ನು ವಿವಾಹವಾಗಿದ್ದು, ನಾಲ್ಕು ವರ್ಷದ ಗಂಡುಮಗುವಿದೆ.
‘ಪತ್ನಿಯ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಇಮ್ರಾನ್ ಜಗಳವಾಡುತ್ತಿದ್ದರು. ಶುಕ್ರವಾರವೂ ದಂಪತಿ ಮಧ್ಯೆ ಜಗಳ ನಡೆದು, ಆಕೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ, ಮನೆಯ ಬಾಗಿಲ ಮುಚ್ಚಿಕೊಂಡು ಪರಾರಿಯಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ರಾತ್ರಿ ಗೌಸಿಯಾಬಿ ಅವರ ಸಹೋದರ ಮೊಬೈಲ್ಗೆ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಮನೆಗೆ ಬಂದು ನೋಡಿದಾಗ ಕೊಲೆ ಆಗಿರುವುದು ಗೊತ್ತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.