ADVERTISEMENT

ಬೃಹತ್ ಪ್ರತಿಭಟನಾ ಮೆರವಣಿಗೆ: ಮೆಜೆಸ್ಟಿಕ್ ಸುತ್ತಮುತ್ತ ವಿಪರೀತ ಸಂಚಾರ ದಟ್ಟಣೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 7:25 IST
Last Updated 8 ಮಾರ್ಚ್ 2021, 7:25 IST
   

ಬೆಂಗಳೂರು:ನಗರದ ಮೆಜೆಸ್ಟಿಕ್‌ನಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದು, ಮೆಜೆಸ್ಟಿಕ್ ಸುತ್ತಮುತ್ತ ವಿಪರೀತ ಸಂಚಾರ ‌ದಟ್ಟಣೆ ಉಂಟಾಗಿದೆ.

ಮೆಜೆಸ್ಟಿಕ್, ಕೆ.ಆರ್. ವೃತ್ತ, ಆನಂದರಾವ್ ವೃತ್ತ, ಅರಮನೆ ರಸ್ತೆ, ರೇಸ್‌ಕೋರ್ಸ್ ರಸ್ತೆ, ಶಿವಾನಂದ ವೃತ್ತ, ಬಸವೇಶ್ವರ ವೃತ್ತ ಹಾಗೂ ಸುತ್ತಮುತ್ತ ವಾಹನಗಳು ನಿಂತಲ್ಲೇ ನಿಂತಿವೆ.

ಪ್ರತಿಭಟನೆ ಬಿಸಿ ವಾಹನ ಸವಾರರಿಗೆ ಹಾಗೂ ಪ್ರಯಾಣಿಕರಿಗೆ ತಟ್ಟುತ್ತಿದೆ.

ADVERTISEMENT

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆಯಲ್ಲಿ ಮೆರವಣಿಗೆ ಹೊರಟಿದೆ. ಓಕಳಿಪುರದಿಂದ ರಾಜಾಜಿನಗರದ ರಾಮಮಂದಿರ ಹಾಗೂ ರಾಜ್‌ಕುಮಾರ್ ರಸ್ತೆಯಲ್ಲಿ ವಾಹನಗಳು ನಿಂತಲ್ಲೇ ನಿಂತಿವೆ. ಕೆ.ಆರ್. ವೃತ್ತ, ಕೆಂಪೇಗೌಡ ರಸ್ತೆಯಲ್ಲಿ ಪ್ರಯಾಣಿಕರ ಗೋಳು ಹೆಚ್ಚಾಗಿದೆ.

ಸೋಮವಾರವಾಗಿದ್ದರಿಂದ ಬಹುತೇಕರು, ಕಚೇರಿ ಹಾಗೂ ಕೆಲಸ ನಿಮಿತ್ತ ಈ ರಸ್ತೆಗಳಲ್ಲಿ ಹೊರಟ್ಟಿದ್ದಾರೆ‌.ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಡುತ್ತಿದ್ದಾರೆ. ದಟ್ಟಣೆ ನಿಯಂತ್ರಣಕ್ಕೆ ಬರುತ್ತಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.